ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ಸದ್ಯ ಕೆರೆ ಅಭಿವೃದ್ಧಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಕೆಲವೆಡೆ ಫೆನ್ಸಿಂಗ್ ಹಾಗೂ ಕೆಲವೆಡೆ ಪಾದಚಾರಿ ಮಾರ್ಗ ಅಭಿವೃದ್ಧಿ ಕಾರ್ಯ ಮಾತ್ರ ಬಾಕಿಯಿದೆ. ಈ ಸಂಬಂಧ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಯಲಹಂಕ ಕೆರೆಯು 292 ಎಕರೆ ಪ್ರದೇಶದಲ್ಲಿಸದ್ದು, ಯಲಹಂಕ ಕೆರೆಯಲ್ಲಿ ಹೂಳನ್ನು ತೆರವುಗೊಳಿಸಿ, ಬಂಡ್, ಜೌಗು ಪ್ರದೇಶ, ಇನ್‌ಲೆಟ್-ಔಟ್‌ಲೆಟ್, ಕೆರೆಗೆ ಕೊಳಚೆ ನೀರು ಸೇರದಿರುವ ಹಾಗೆ ತಿರುವುಗಾಲುವೆ ನಿರ್ಮಾಣ, ಭದ್ರತಾ ಸಿಬ್ಬಂದಿಯ ಕೊಠಡಿ, ಸೈಕಲ್ ಟ್ರ್ಯಾಕ್, ವಿಹಾರಕ್ಕೆ ಬರುವವರಿಗೆ ವಿರಾಮದ ಸ್ಥಳ ಹಾಗೂ ಕೆರೆಯ ಸುತ್ತಲು ಫೆನ್ಸಿಂಗ್ ಅಳವಡಿಕೆ ಮಾಡಲಾಗಿದೆ. ಮಳೆಗಾಲದ ವೇಳೆ ಸ್ಥಳೀಯ ಪ್ರದೇಶದಲ್ಲಿ ಜಾಲಾವೃತವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರಾಜಕಾಲುವೆಗಳ ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
0 Comments