Ticker

6/recent/ticker-posts

Ad Code

Responsive Advertisement

Flash News: ಮುಸ್ಲಿಂಮರಿಗೆ ವ್ಯಾಪಾರ ನಿರ್ಬಂಧ ಬಿಜೆಪಿ ಪಕ್ಷದ ಅಜೆಂಡ: ಡಿಕೆಶಿ

ಹಾಸನ, ಏ.06: "ಮುಸ್ಲಿಂಮರ ವ್ಯಾಪಾರ ವಹಿವಾಟು ನಿರ್ಬಂಧ ಬಿಜೆಪಿ ಪಕ್ಷದ ಅಜೆಂಡಾ. ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಹೊರಟಿದೆ ಈ ಸರಕಾರ. ಈ ಸರಕಾರಕ್ಕೆ ಮಾನ ಮರ್ಯಾದೆ ಯಾವುದು ಇಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದರು.

ಇಂದು ಹಾಸನದಲ್ಲಿ ಮಾತಾನಾಡಿದ ಅವರು, "ಮೊನ್ನೆ ಹಲಾಲ್ ಕಟ್ ವಿಚಾರವಾಗಿ ದಾಳಿ ಮಾಡಿದರು. ರಾಜ್ಯದಲ್ಲಿ ಕುರಿ, ಕೋಳಿ ಸಾಕುವವರು ರೈತರು. ಇವುಗಳನ್ನು ನಿಗದಿತ ಸಮಯದಲ್ಲಿ ಕಟಾವು ಮಾಡದಿದ್ದರೆ ರೈತರಿಗೆ ಅವುಗಳ ಮೇವಿನ ಹೊರೆ ಬೀಳಲಿದೆ" ಎಂದರು.

"ಕೋವಿಡ್ ಸಮಯದಲ್ಲಿ ಅಲ್ಪಸಂಖ್ಯಾತರೇ ರೈತರಿಂದ ಮಾವು ಖರೀದಿ ಮಾಡಿದ್ದರು, ಅವರು ಬಿಟ್ಟು ಸರಕಾರ ಖರೀದಿ ಮಾಡಿತ್ತ. ಈಗ ಅವರ ವ್ಯಾಪಾರ ನಿಷೇಧ ಮಾಡಿದರೆ ನಷ್ಟ ಆಗುವುದು ರೈತರಿಗೆ. ಆಗ ಮಾವಿನ ಬೆಲೆಯೂ ಏರಿಕೆಯಾಗುತ್ತದೆ, ಜೊತೆಗೆ ಆರ್ಥಿಕತೆಗು ಒಡತ ಬೀಳತ್ತೆ. ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದ ರೈತರಿಗೆ ಈ ಕೆಟ್ಟ ಸರಕಾರ ಯಾವುದೇ ರೀತಿಯ ಸಹಾಯ ಮಾಡಲಿಲ್ಲ. ಪರಿಹಾರ ನೀಡಲು ಆನ್ಲೈನ್ ಮೂಲಕ ಅರ್ಜಿ ಕರೆದರು. ಯಾರೂ ಕೂಡ ಅರ್ಜಿ ಹಾಕಲು ಸಾಧ್ಯವಾಗದೆ ಪರಿಹಾರ ಪಡೆಯಲಿಲ್ಲ" ಎಂದು ಹೇಳಿದರು.

"ರೈತರನ್ನು ಬದುಕಿರುವಾಗಲೇ ಸಾಯಿಸುತ್ತಿದ್ದಾರೆ ಈ ಬಿಜೆಪಿ ಸರಕಾರದವರು. ಬಿಜೆಪಿಯವರು ಮತ ಧ್ರುವೀಕರಣ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಜನರನ್ನು ತಪ್ಪುದಾರಿಗೆ ಎಳೆಯುತ್ತಿರುವವರನ್ನು ಶಿಕ್ಷಿಸುತ್ತಿಲ್ಲ, ಬದಲಾಗಿ ಅವರುಗಳಿಗೆ ಪ್ರೋತ್ಸಾಯಿಸುತ್ತಿದೆ. ಇದರಿಂದ ಚುನಾವಣೆ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಭಾವಿಸಿದ್ದಾರೆ, ಭ್ರಮೆಯಲ್ಲಿದ್ದಾರೆ. ಮಾವಿನ ವಿವಾದದಿಂದ ರೈತರಿಗೆ ನಷ್ಟವಾಗಲಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ" ಎಂದು ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಕಾಲದಲ್ಲಿ ಶಾದಿಭಾಗ್ಯ ತಂದು ಒಂದು ಸಮುದಾಯ ಓಲೈಸಿ ಸಮಾಜ ಒಡೆದರು ಎಂಬ ಸಿ. ಟಿ. ರವಿ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ. ಕೆ. ಶಿವಕುಮಾರ್, "ಅವರಿಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ ನಾನು. ರವಿಅಣ್ಣ ಬಹಳ ದೊಡ್ಡ ಮೇಧಾವಿಗಳು, ನಾವು ನಮ್ಮ ಕಾರ್ಯಕ್ರಮ ರೂಪಿಸಿದ್ದೇವೆ. ಅವರು ಜನರಿಗೆ ಉಪಯೋಗವಾಗುವ ಕಾರ್ಯಕ್ರಮ ಮಾಡಲಿ. ಅದನ್ನು ಜನರಿಗೆ ತಲುಪಿಸಿ ನಂತರ ಮಾತನಾಡಲಿ" ಎಂದರು.

ಎಲ್ಲ ಪಕ್ಷಗಳು ಒಂದೊ0ದು ಸಮುದಾಯ ಓಲೈಸುತ್ತಿವೆಯೇ? ಎಂಬ ಪ್ರಶ್ನೆಗೆ ಉತ್ತರ ನೀಡಿ, "ನಾನು ಯಾವಾಗಲೂ ಒಂದು ಮಾತು ಹೇಳುತ್ತಿರುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗ ಅಧಿಕಾರಕ್ಕೆ ಬಂದ0ತೆ. ನಾವು ಪುಟಾಣಿ ಮಕ್ಕಳಿಗೆ ಬಿಸಿಯೂಟ ಯೋಜನೆ ತಂದೆವು. ಹೈನುಗಾರಿಕೆ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಕೊಟ್ಟೆವು" ಎಂದು ವಿವರಿಸಿದರು.

"ಪರಿಶಿಷ್ಟರ ಜನಸಂಖ್ಯೆ ಆಧಾರದ ಮೇಲೆ ಅನುದಾನ ಕೊಟ್ಟೆವು. ಯುಪಿಎ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು ಕಾಯ್ದೆ ತಂದಿತ್ತು. ಆದರೆ ಬಿಜೆಪಿ ಅವರು ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ, ಆರ್ಟಿಕಲ್ 370 ಯಂತಹ ಕಾನೂನು ತರುತ್ತಿದ್ದಾರೆಯೇ ಹೊರತು, ಜನರ ಆದಾಯ ಹೆಚ್ಚಿಸಲು, ರೈತರ ಬೆಂಬಲ ಬೆಲೆಗೆ, ಇಂಧನ ಬೆಲೆ ನಿಯಂತ್ರಣ ಮಾಡಲು, ಯುವಕರಿಗೆ ಉದ್ಯೋಗ ನೀಡಲು ಯಾವುದಾದರೂ ಕಾರ್ಯಕ್ರಮ ಮಾಡಿದ್ದಾರೆಯೇ?" ಎಂದು ಡಿ. ಕೆ. ಶಿವಕುಮಾರ್ ಪ್ರಶ್ನಿಸಿದರು.

ಚುನಾವಣೆ ಬಳಿಕ ಮೈತ್ರಿ; "ನಾವು ನಮ್ಮ ಕಾಲ ಮೇಲೆ, ಸ್ವಂತ ಬಲದ ಸರ್ಕಾರ ರಚನೆ ಮಾಡುತ್ತೇವೆ. ಜನ ಕಾಂಗ್ರೆಸ್ ಸರ್ಕಾರ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ" ಎಂದು ಹೇಳಿದ ಡಿ. ಕೆ. ಶಿವಕುಮಾರ್ ಚುನಾವಣೋತ್ತರ ಮೈತ್ರಿಯನ್ನು ತಳ್ಳಿ ಹಾಕಿದರು.

"ಹಾಸನದಲ್ಲಿ ನಮಗೆ ದೊಡ್ಡ ನಾಯಕರುಗಳೇ ಬರಬೇಕು ಎಂಬ ನಿರೀಕ್ಷೆ ಇಲ್ಲ. 5-10 ಮತಗಳಿಂದ 2-3 ಸಾವಿರ ಮತಗಳನ್ನು ತರುವ ಕಾರ್ಯಕರ್ತರು ಪಕ್ಷ ಸೇರಿದರೆ ಸಾಕು. ನಮ್ಮ ಪಕ್ಷ ಸೇರಲು ಸುಮಾರು ಅರ್ಜಿಗಳು ಬಂದಿವೆ. ಈ ವಿಚಾರದಲ್ಲಿ ನಾವು ಸ್ಥಳೀಯ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತೇವೆ. ಪಕ್ಷದ ಸ್ಥಳೀಯ ಕಾರ್ಯಕರ್ತರ ಜತೆ ಅವರು ಬೆರೆಯಬೇಕು. ಈ ಅರ್ಜಿ ಸ್ವೀಕರಿಸಲು ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಇದೆ. ಯಾರೆಲ್ಲ ಅರ್ಜಿ ಹಾಕಿದ್ದಾರೆ ಎಂಬುದು ಗೌಪ್ಯವಾದ ವಿಚಾರ. ಅದನ್ನು ಬಹಿರಂಗಪಡಿಸುವುದಿಲ್ಲ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

Varthajala Daily, Malleshwaram, Bengaluru

Post a Comment

0 Comments

Ad Code

Responsive Advertisement