ಬಳ್ಳಾರಿ,ಮೇ 13: ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಪಾಲಿಕೆ ಮಹಾಪೌರರಾದ ರಾಜೇಶ್ವರಿ ಸುಬ್ಬರಾಯ್ಡು ಅವರ ಅಧ್ಯಕ್ಷತೆಯಲ್ಲಿ ಮೇ 18ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಆವರು ತಿಳಿಸಿದ್ದಾರೆ.
ಸದರಿ ಸಭೆಯಲ್ಲಿ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆ ಇರುವುದರಿಂದ ತಾವು ತಪ್ಪದೇ ಹಾಜರಿದ್ದು,ಸಮರ್ಪಕ ಮಾಹಿತಿ ಒದಗಿಸುವಂತೆ ಲೋಕೋಪಯೋಗಿ ಇಲಾಖೆ,ಆರೋಗ್ಯ ಇಲಾಖೆ, ಭೂಸೇನಾ ನಿಗಮ, ಅರಣ್ಯಾಧಿಕಾರಿಗಳು,ಜೆಸ್ಕಾಂ, ಬುಡಾ ಆಯುಕ್ತರು, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

0 Comments