Ticker

6/recent/ticker-posts

Ad Code

Responsive Advertisement

ಕೊಟ್ಟೂರುಸ್ವಾಮಿ ಬಿಇಡಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ 5 ಇ ಮಾದರಿ ಪಾಠಯೋಜನೆ ಕಾರ್ಯಾಗಾರ

ಅವಕಾಶಗಳನ್ನು ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ನೀಡಿ:ವಿಎಸ್‍ಕೆ ವಿವಿ ಕುಲಪತಿ ಪ್ರೊ.ಸಿದ್ದು ಆಲಗೂರ

ಬಳ್ಳಾರಿ,ಮೇ 20: ವೀರಶೈವ ವಿದ್ಯಾವರ್ಧಕ ಸಂಘದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರದಂದು ನಗರದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರಮಟ್ಟದ 5ಇ ಮಾದರಿ ಪಾಠಯೋಜನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಅಲಗೂರ್ ಅವರು ಮಾತನಾಡಿ ಜೀವನದಲ್ಲಿ ಸಿಕ್ಕಂತಹ ಅವಕಾಶಗಳನ್ನು ಯಾವುದೇ ಕ್ಷೇತ್ರದಲ್ಲಾಗಲಿ ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ನೀಡಬೇಕೆಂದು ಕರೆ ನೀಡಿದರು.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರುಗಳ ಸಹಕಾರದಿಂದ ಬಿ.ಇಡಿ. ಮಹಾವಿದ್ಯಾಲಯಗಳಲ್ಲಿ ಸಾಕಷ್ಟು ಸುಧಾರಣೆಗಳನ್ನು ತರುವಲ್ಲಿ ಸಹಾಯಕವಾಯಿತು ಎಂದು ವಿವರಿಸಿದ ಅವರು ಇದಕ್ಕೆ ನಿದರ್ಶನವಾಗಿ  ಬಿ.ಇಡಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಅಮೂಲಾಗ್ರ ಬದಲಾವಣೆಯೊಂದಿಗೆ ಕ್ಲಸ್ಟರ್ ಮಟ್ಟದಲ್ಲಿ ವಿಷಯವಾರು ಅಂತರ್ ಕಾಲೇಜಿನ ಪರಿಣಿತ ಬೋಧಕರೇ ಪ್ರಾಯೋಗಿಕ ಪಾಠ ಮೌಲ್ಯಮಾಪನ ಮಾಡುವ ವಿನೂತನ ಯೋಜನೆಯನ್ನು ಜಾರಿಗೆ ತಂದು ಯಶಸ್ವಿಗೊಳಿಸಲಾಯಿತು ಎಂದರು.

ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯವು ಗುಣಮಟ್ಟದ ಶಿಕ್ಷಣ ನೀಡುತ್ತಾ ಇತರೆ ಮಹಾವಿದ್ಯಾಲಯಗಳಿಗೆ ಮಾದರಿಯಾಗಿದೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಿ.ವಿ.ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸಿ ವೈಜ್ಞಾನಿಕ ಬೋಧನಾ ವಿಧಾನವಾದ 5 ಇ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಆಗುವ ಪ್ರಯೋಜನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೆಚ್.ಎಂ.ಗುರುಸಿದ್ಧಸ್ವಾಮಿ ಅವರು ಮಾತನಾಡಿ, ಹಿಂದಿನ ಕಾಲದ ಶಿಕ್ಷಣ ಪದ್ಧತಿಯಲ್ಲಿ ಗುರುವೇ ಪ್ರಮುಖ ಪಾತ್ರವಹಿಸುತ್ತಿದ್ದರು. ಆದರೆ ಈಗಿನ ಬದಲಾಗುವ  ಶಿಕ್ಷಣ ಪದ್ಧತಿಯಲ್ಲಿ ವಿದ್ಯಾರ್ಥಿಗಳ ಪಾತ್ರವೇ ಮುಖ್ಯವೆಂದು ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020ರ ವಿಷಯವನ್ನು ವಿವರಿಸುತ್ತಾ 5 ಇ ಮಾದರಿ ಪಾಠಯೋಜನೆಯ ಸಂಕ್ಷಿಪ್ತವಾಗಿ ವಿವರಿಸಿ ಬದಲಾದ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು ಹೊಂದಿಕೊಳ್ಳಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮರ್ಚೇಡ್ ಮಲ್ಲಿಕಾರ್ಜುನಗೌಡ, ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಕಾತ್ಯಾಯಿನಿ ಮರಿದೇವಯ್ಯ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಕೋರಿ ವಿರುಪಾಕ್ಷಪ್ಪ, ಕಪ್ಪಗಲ್ ಗಿರಿಜಮ್ಮ, ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್ ಎ. ಹಿರೇಮಠ್, ಸಹಾಯಕ ಪ್ರಾಧ್ಯಾಪಕರಾದ ಡಾ.ಜಗದೀಶ್ ಬಸಾಪುರ, ಡಾ.ಸುರೇಶ್‍ಬಾಬು, ಡಾ.ವಿಕ್ರಂ ಪಿ.ಹಿರೇಮಠ್ ಮತ್ತು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರುಗಳು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯಯ, ವಿಶ್ವವಿದ್ಯಾಲಯದ ಅಡಿಯಲ್ಲಿರುವ ಬರುವ ಎಲ್ಲಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಬೋಧಕ ವೃಂದದವರು ಭಾಗವಹಿಸಿದ್ದರು.




 


Post a Comment

0 Comments

Ad Code

Responsive Advertisement