ಬೆಂಗಳೂರು ಮೇ 27 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಹಾಗೂ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ವಿಜ್ಞಾನ ಪ್ರಸಾರ, ನವದೆಹಲಿ ಸಂಸ್ಥೆಗಳು ಕುತೂಹಲಿಯ ವಿಜ್ಞಾನ ಸಂವಹನ, ಜನಪ್ರಿಯ ವಿಜ್ಞಾನ ಹಾಗೂ ವಿಸ್ತರಣೆ (Science Communication, Popularisation and Extension SCOPE) ಯೋಜನೆಯ ಭಾಗವಾಗಿ ಹಾಗೂ ಬೆಂಗಳೂರಿನ ಕರ್ನಾಟಕ ಪತ್ರಕರ್ತೆಯರ ಸಂಘದ ಸಹಯೋಗದೊಂದಿಗೆ, ಜೂನ್ 4, 2022ರ ಶನಿವಾರ, ಬೆಂಗಳೂರಿನ ಪತ್ರಕರ್ತೆಯರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿದೆ.
ಈ ಕಾರ್ಯಾಗಾರವು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಆವರಣದಲ್ಲಿ 2022ರ ಜೂನ್ 4ನೇ ತಾರೀಖಿನ ಶನಿವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಜರುಗಲಿದೆ. ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಪ್ರೊ ಎಸ್ ಅಯ್ಯಪ್ಪನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿಜ್ಞಾನ ಪ್ರಸಾರ್ ಸಂಸ್ಥೆಯ ನಿರ್ದೇಶಕರಾದ ಡಾ. ನಕುಲ್ ಪರಾಶರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಕಾರ್ಯನಿರತ ಪತ್ರಕರ್ತಯರನ್ನು ಹಾಗೂ ಪತ್ರಿಕೋದ್ಯಮದ ವಿದ್ಯಾರ್ಥಿನಿಯರನ್ನು ಒಂದೆಡೆ ಸೇರಿಸಿ, ವಿಜ್ಞಾನ ಪತ್ರಿಕೋದ್ಯಮದ ಬಗ್ಗೆ ಚರ್ಚಿಸುವ ಸಲುವಾಗಿ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ನಾಡಿನ ಸುಪುಸಿದ ಪತ್ರಿಕೆಗಳ ಪತ್ರಕರ್ತೆಯರು ಹಾಗೂ ಫ್ರೀ ಲ್ಯಾನ್ಸ್ ಪತ್ರಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವವರು ಗೂಗಲ್ ಫಾರಂ ಮೂಲಕ ದಿನಾಂಕ 27.5.2022 ಒಳಗಾಗಿ ನೋಂದಾಯಿಸಿಕೊಳ್ಳಬಹುದು. https://forms.gle/98wt4Hw2jtdKgAAM7.. ಅಥವಾ 9886640328 / 9449120618 / 9739467440 ಕರೆ ಮಾಡಿ ವಿವರಗಳನ್ನು ಪಡೆದುಕೊಳ್ಳಬಹುದು.
ಅಕಾಡಮಿ ವಿಳಾಸ: ಪ್ರೊ ಯು.ಆರ್. ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಆವರಣ, ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು - 560 097.
0 Comments