Ticker

6/recent/ticker-posts

Ad Code

Responsive Advertisement

ಅನುಪಾಲನಾ ಗೃಹ ಪ್ರಾರಂಭಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಮೇ 21,  (ಕರ್ನಾಟಕ ವಾರ್ತೆ) : ಮಕ್ಕಳ ರಕ್ಷಣಾ ನಿರ್ದೇಶನಾಲಯವು ಸಂಕಷ್ಟದಲ್ಲಿರುವ 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಹಾಗೂ ವೃತ್ತಿಪರ ಕೌಶಲ್ಯ ತರಬೇತಿ ಪಡೆಯಲು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ಕಂದಾಯದ ವಿಭಾಗದಲ್ಲಿ 3 ಅನುಪಾಲನಾ ಗೃಹಗಳನ್ನು ಪ್ರಾರಂಭಿಸಲು ಸರ್ಕಾರವು ಆದೇಶ ನೀಡಿದೆ. ಆಸಕ್ತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಮೇ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಕಿದ್ವಾಯಿ ಆಸ್ಪತ್ರೆ ಪಕ್ಕ,ಡಾ. ಎಂ.ಎಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಹಾಗೂ ದೂರವಾಣಿ ಸಂಖ್ಯೆ: 080-29523458, 8277525991 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement