ಬಳ್ಳಾರಿ,ಮೇ08: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಶ್ರೀ ಭಗೀರಥ ಜಯಂತ್ಯೋತ್ಸವದ ಮೆರವಣಿಗೆಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು.
ಶ್ರೀ ಭಗೀರಥ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿರಿಯರು ಹೇಳಿದ ಹಾಗೆ ಪ್ರತಿಜ್ಞೆ ಎನ್ನುವುದು ಭೀಷ್ಮನ ತರ ಇರಬೇಕು ಹಾಗೆಯೇ ಪ್ರಯತ್ನ ಎನ್ನುವುದು ಭಗೀರಥ ಮಹರ್ಷಿ ಅವರ ಹಾಗೆ ಇರಬೇಕು ಎನ್ನುತ್ತಾರೆ. ಆದ್ದರಿಂದ ಭಗೀರಥ ಮಹರ್ಷಿ ಅವರ ಗುಣಗಳನ್ನು ಮತ್ತು ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಉಪ್ಪಾರ ಸಮುದಾಯದವರ ಏಳಿಗೆಗಾಗಿ ನಮ್ಮ ಸರಕಾರವು ಸದಾ ಸಿದ್ಧ ಎಂದು ಹೇಳಿದ ಅವರು, ಸಾಮಾಜಿಕ,ಶೈಕ್ಷಣಿಕವಾಗಿ ಸೇರಿದಂತೆ ಸಮಗ್ರವಾಗಿ ಈ ಸಮುದಾಯವನ್ನು ಅಭಿವೃದ್ಧಿಪಡಿಸಲು ನಮ್ಮ ಸರಕಾರವು ಬಜೆಟ್‍ನಲ್ಲಿ 250 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದೆ ಎಂದರು.
ಬಹುತೇಕ ಈ ಸಮುದಾಯದಲ್ಲಿ ಯುವಕರು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದು, ಅವರ ಕೌಶಲ್ಯ ಅಭಿವೃದ್ಧಿಗಾಗಿ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದ ಸಚಿವ ಶ್ರೀರಾಮುಲು ಅವರು ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ನಮ್ಮ ಸರಕಾರವು ಸಹಕಾರ ನೀಡಲಿದೆ ಎಂದು ಹೇಳಿದರು.
ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ತುಂಬಲು ಕ್ರಮವಹಿಸಲಾಗುವುದು. ಶ್ರೀನಿವಾಸಮೂರ್ತಿ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಾಗೂ ಇಲಾಖೆ ಲಾಭದಾಯಕವನ್ನಾಗಿಸುವ ನಿಟ್ಟಿನಲ್ಲಿ ನೀಡಲಾದ ವರದಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಎಎಸ್ಪಿ ಗುರುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಸೇರಿದಂತೆ ಉಪ್ಪಾರ ಸಮುದಾಯದ ಮುಖಂಡರು ಇದ್ದರು.
ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಇಂದಿರಾ ವೃತ್ತದ ಮೂಲಕ ಗಡಿಗಿ ಚೆನ್ನಪ್ಪ ವೃತ್ತದಿಂದ ಬೆಂಗಳೂರು ರಸ್ತೆ ಮೂಲಕ ಹಳೆ ಬ್ರೂಸ್‍ಪೇಟೆ ಪೆÇೀಲಿಸ್ ಠಾಣೆಯಿಂದ ಹೆಚ್.ಆರ್.ಗವಿಯಪ್ಪ ವೃತ್ತದ ಮುಖಾಂತರ ಬಿ.ಡಿ.ಎ.ಎ. ಸಭಾಂಗಣದವರೆಗೆ ನಡೆಯಿತು.
ನಂತರ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.
ಶರಣ ಸಾಹಿತ್ಯ ಪರಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಕೆ.ಬಿ.ಸಿದ್ದಲಿಂಗಪ್ಪ ಅವರು ಶ್ರೀ ಭಗೀರಥ ಮಹರ್ಷಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಂ ವೀರಭದ್ರಪ್ಪ, ಬಳ್ಳಾರಿ ನಗರ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಜೆ.ಎನ್.ಗಣೇಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಎಂ.ರಾಜೇಶ್ವರಿ, ಎಡಿಸಿ ಪಿ.ಎಸ್.ಮಂಜುನಾಥ, ಅಪರ ಪೊಲೀಸ್ ವರಿಷ್ಠಾಧಿಕಾರಿ ಗುರುನಾಥ, ಸಹಾಯಕ ಆಯುಕ್ತರಾದ ಡಾ.ಆಕಾಶ್ ಶಂಕರ್, ಬಳ್ಳಾರಿ ನಗರ ಡಿವೈಎಸ್ಪಿ ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ ರಂಗಣ್ಣನವರ ಸೇರಿದಂತೆ ಸಮುದಾಯದ ಭಾಂದವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
0 Comments