Ticker

6/recent/ticker-posts

Ad Code

Responsive Advertisement

ಚಿತ್ರಕಲಾವಿದರ ನೈಪುಣ್ಯತೆ ಹೆಚ್ಚಿಸಲು ಅರ್ಜಿ ಆಹ್ವಾನ

ಬೆಂಗಳೂರು, ಮೇ 20  (ಕರ್ನಾಟಕ ವಾರ್ತೆ) : ಕರ್ನಾಟಕ ಲಲಿತಕಲಾ ಅಕಾಡೆಮಿಯು 2022-23ನೇ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಚಿತ್ರಕಲಾವಿದರಿಗೆ ನೈಪುಣ್ಯತೆಯನ್ನು ಹೆಚ್ಚಿಸಲು ಪ್ರತಿಷ್ಠಿತ ಸಂಸ್ಥೆಗಳಲ್ಲಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗುರು / ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಚಿತ್ರಕಲೆಯಲ್ಲಿ ಡಿಪ್ಲೋಮೊ ಹಾಗೂ ಪದವಿ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು. ಈಗಾಗಲೇ ರಾಜ್ಯದಲ್ಲಿ ಕಲಾ ಪ್ರದರ್ಶನಗಳನ್ನು ಏರ್ಪಡಿಸಿರುವ ಬಗ್ಗೆ ವಿವರ ಹಾಗೂ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಸರ್ಕಾರಿ ಹಾಗೂ ಅರೆ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ನೌಕರರಾಗಿರುವವರಿಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಮೇ 25ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22480297 ಇಲ್ಲಿ ಸಂಪರ್ಕಿಸಬಹುದು.


Post a Comment

0 Comments

Ad Code

Responsive Advertisement