ಬೆಂಗಳೂರು, ಮೇ 31 (ಕರ್ನಾಟಕ ವಾರ್ತೆ) :ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
0 Comments