ಬಳ್ಳಾರಿ ಮೇ 27. ಸಾಮಾಜಿಕ ಜಾಲತಾಣಗಳು ಸಂಬಂಧಗಳನ್ನು ಬೆಸೆಯುವ ಸಾಧನಗಳಾಗಿವೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಚೇಳ್ಳಗುರ್ಕಿ ಹೇಳಿದರು. ಅವರು ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸ್ನೇಹಿ ಗ್ರಾಮ ಸಭೆ ಹಾಗೂ ಜಗಜ್ಯೋತಿ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಕ್ಕಳು ಪಾಠಗಳಿಗೆ ಸಂಬಂಧ ಪಟ್ಟ ಹೆಚ್ಚು ಹೆಚ್ಚು ಮಾಹಿತಿ ಸಂಗ್ರಹಿಸಲು ಮಾತ್ರ ಸಾಮಾಜಿಕ ಜಾಲತಾಣಗಳನ್ನು ಬಳಸಿ ಎಂದು ಹೇಳಿದರು.
ಎಸ್. ಡಿ.ಎಂ.ಸಿ ಅಧ್ಯಕ್ಷ ದೊಡ್ಡ ಕುಮಾರ ಉದ್ಘಾಟಿಸಿದರೆ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುಮಲತಾ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ಶಿಕ್ಷಕರಾದ ಬಸವರಾಜ ಮಾತನಾಡಿದ ಅವರು ಅಮೇರಿಕಾ, ಸ್ಪೇನ್,ಇಟಲಿ ಮುಂದುವರಿದ ದೇಶಗಳು ಸಾಮಾಜಿಕ ಜಾಲತಾಣಗಳನ್ನು ಅವಲಂಬಿಸಿವೆ ಎಂದು ಹೇಳಿದರು.ಗ್ರಂಥ ಪಾಲಕರಾದ ಸಿದ್ದಪ್ಪ, ಶಿಕ್ಷಕರಾದ ಮುನಾವರ ಸುಲ್ತಾನ, ದಿಲ್ಷಾದ್ ಬೇಗಂ,ಮೋದಿನ್ ಸಾಬ್, ಚನ್ನಮ್ಮ, ಸುಮತಿ, ದೈಹಿಕ ಶಿಕ್ಷಣ ಶಿಕ್ಷಕಿ ಸುಧಾ,ಶ್ವೇತಾ, ಉಮ್ಮೇಹಾನಿ, ಶಶಮ್ಮ, ಬಾಷ,ಉಮೇಶ್, ಮುತ್ತು ಹಾಗೂ ಕೊಂಡಯ್ಯ ಮುಂತಾದವರು ಉಪಸ್ಥಿತರಿದ್ದರು.

0 Comments