ಬಳ್ಳಾರಿ ಮೇ 31. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರರವರು ಭೇಟಿಯಾಗಿ, ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಮಾಹಿತಿ ಪಡೆದರು. ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆಯೂ ಸುರ್ದೀಘವಾಗಿ ಚರ್ಚಿಸಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

0 Comments