Ticker

6/recent/ticker-posts

Ad Code

Responsive Advertisement

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಹಿತಿಗಾಗಿ ಕ್ಷೇತ್ರ ಸಮೀಕ್ಷೆ-ಪ್ರೀತಿ ಗೆಹ್ಲೋಟ್.

  ಬಳ್ಳಾರಿ,ಮೇ.04: ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭೌಗೋಳಿಕ ಮಾಹಿತಿ ವ್ಯವಸ್ಥೆ(GSI Based Property information system) ಆಧಾರಿತ ಆಸ್ತಿ ಮಾಹಿತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರವು ಆದೇಶಿಸಿರುತ್ತದೆ. ಸದರಿ ವ್ಯವಸ್ಥೆ ಅಭಿವೃದ್ಧಿಗೊಳಿಸಲು, ಪೌರಾಡಳಿತ ನಿರ್ದೇಶನಾಲಯವು ರಿಮೋಟ್ ಸೆನ್ಸಿಂಗ್ ಇನ್ಸ್ಟ್ರೂಮೇಂಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕ್ಷೇತ್ರ ಸಮೀಕ್ಷಾ ಕಾರ್ಯ ಕೈಗೊಳ್ಳಲು ಕಾರ್ಯಾದೇಶ ನೀಡಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.

ಆದ್ದರಿಂದ, ಭೌಗೋಳಿಕ ಮಾಹಿತಿ ವ್ಯವಸ್ಥೆ(GSI Based Property information system) ಆಧಾರಿತ ಆಸ್ತಿ ಮಾಹಿತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಬಳ್ಳಾರಿ ಮಹಾನಗರ ಪಾಲಿಕೆಯ ಹಾಗೂ ರಿಮೋಟ್ ಸೆನ್ಸಿಂಗ್ ಇನ್ಸ್ಟ್ರೂಮೇಂಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಬ್ಬಂದಿಗಳು ಕ್ಷೇತ್ರ ಸಮೀಕ್ಷೆ ಚಟುವಟಿಕೆಯನ್ನು ಕೈಗೊಳ್ಳುತ್ತಿದ್ದು, ಬಳ್ಳಾರಿ ನಗರದ ಸಾರ್ವಜನಿಕರು ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.




 


Post a Comment

0 Comments

Ad Code

Responsive Advertisement