ಬೆಂಗಳೂರು, ಮೇ 25, (ಕರ್ನಾಟಕ ವಾರ್ತೆ) : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯು ವತಿಯಿಂದ ಉದ್ಯೋಗ ವಿನಿಮಯ ಕೇಂದ್ರ, ನ್ಯಾಷನಲ್ ಕಾಲೇಜು ಬೆಂಗಳೂರು ಮತ್ತು ಮ್ಯಾಜಿಕ್ ಬಸ್ ಇಂಡಿಯಾ ಪೌಂಡೇಷನ್ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಮೇ 26 ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣ / ಅನುತ್ತೀರ್ಣ, ಪಿ.ಯು.ಸಿ., ಐ.ಟಿ.ಐ (ಎಲ್ಲಾ ಟ್ರೇಡ್‍ಗಳು) ಡಿಪ್ಲೋಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಉದ್ಯೋಗಾಂಕ್ಷಿಗಳು ತಮ್ಮ ವೈಯುಕ್ತಿಕ ವಿವರವುಳ್ಳ (ಬಯೋಡೇಟಾ) ಹಲವು ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6301470167 / 8860393410 / 7353710463 / 9886312777 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments