ಬಳ್ಳಾರಿ, ಮೇ. 05.ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಂಪ್ಲಿ ವಿಧಾನಸಭಾ ಕ್ಷೇತ್ರದ ಕೊರ್ಲಗೊಂದಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಭೇಟಿ ನೀಡಿ, ಸದಸ್ಯರನ್ನು ಭೇಟಿ ಮಾಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಕಪ್ಪಗಲ್ಲು, ಬಸರಕೋಡು, ಚಾನಾಳ್, ಹಂದಿಹಾಳ್, ಕೊರ್ಲಗೊಂದಿ ಮತ್ತು ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಮಾಡಿದ ವೈ.ಎಂ. ಸತೀಶ್ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಜೊತೆ ಸಮಾಲೋಚನೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಗಳು ಮತ್ತು ಪರಿಹಾರದ ಮಾರ್ಗೋಪಾಯಗಳ ಕುರಿತು ಚರ್ಚೆ ನಡೆಸಿದರು.
`ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ಕೈಗೊಂಡು ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವೆ. ಕೆಲವೆಡೆ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಸಲಹೆ ನೀಡಿರುವೆ' ಎಂದರು. ಶಾಸಕರು ಕೋಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸೋಮಸಮುದ್ರ, ಕೋಳೂರು, ದಮ್ಮೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯಿತಿಗಳಿಗೆ ಮೇ 6 ರ ಶುಕ್ರವಾರ, ಬಾದನಹಟ್ಟಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಯರಂಗಳಿ, ಬಾದನಹಟ್ಟಿ, ಸಿದ್ಧಮ್ಮನಹಳ್ಳಿ, ಕಲ್ಲುಕಂಭ ಮತ್ತು ಓರ್ವಾಯಿ ಗ್ರಾಮ ಪಂಚಾಯಿತಿಗಳಿಗೆ ಮೇ 7ರ ಶನವಾರ ಭೇಟಿ ನೀಡಿ, ಗ್ರಾಮಗಳಲ್ಲಿಯ ಕುಡಿಯುವ ನೀರಿನ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

0 Comments