ಬೆಂಗಳೂರು, ಮೇ 16 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು 2022ರ ಮೇ 20, ರಂದು ನಡೆಸಲಿರುವ ಹಿನ್ನೆಲೆಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಾರ್ವತ್ರಿಕ / ಉಪಚುನಾವಣೆ ನಡೆಯುವ ಗ್ರಾಮಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಮೇ 20 ಶುಕ್ರವಾರದಂದು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1977 ರ ನಿಯಮ 64 ZD ಮತ್ತು ಕರ್ನಾಟಕ ಪೌರ ನಿಗಮಗಳ (ಚುನಾವಣೆ) ನಿಯಮಗಳು 1979ರ ನಿಯಮ 70 XF ಗಳನ್ನು ಓದಿಕೊಂಡಂತೆ, ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ -135 ಬಿ ರಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments