ಬೆಂಗಳೂರು ಮೇ 26.2022: ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ. ಯೋಗವು ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸಿನ ಗುರಿಯನ್ನು ಹೊಂದಿರುವ ಜೀವನ ಕಲೆಯಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು.
ಗುರುವಾರ ನಗರದ ಪ್ರಶಾಂತಿ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಅನುಸಂಧಾನ ಡೀಮ್ಡ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಯೋಗ ಸಂಶೋಧನೆ ಕುರಿತು 24 ನೇ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಡೀ ಜಗತ್ತು ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆ. ಈ ಮಾರಣಾಂತಿಕ ರೋಗವನ್ನು ಗುಣಪಡಿಸಲು ಯಾವುದೇ ಔಷಧಿ ವ್ಯವಸ್ಥೆಯು ಸಂಪೂರ್ಣವಾಗಿ ಸಹಾಯ ಮಾಡುವುದಿಲ್ಲ. ಆದ್ದರಿಂದ ರೋಗಿಗಳ ಚಿಕಿತ್ಸೆಗೆ ಸಮಗ್ರ ವಿಧಾನದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸರ್ಕಾರದ ಆಯುಷ್ ಸಚಿವಾಲಯವು ಆಯುರ್ವೇದ ಮತ್ತು ಯೋಗಕ್ಕೆ ವಿಶೇಷ ಒತ್ತು ನೀಡುವ ಮೂಲಕ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಸಮಗ್ರ ಆರೋಗ್ಯವನ್ನು ಉತ್ತೇಜಿಸುತ್ತಿದೆ ಎಂದು ಹೇಳಿದರು.
ಪ್ರಸ್ತುತ ವಾತಾವರಣದಲ್ಲಿ, ಆಯುರ್ವೇದದಂತಹ ವೈದ್ಯಕೀಯ ವ್ಯವಸ್ಥೆಯ ಮೂಲಕ ಮಾತ್ರ ಸಾಧಿಸಬಹುದಾದ ಏಕೈಕ ಆಯ್ಕೆಯೆಂದರೆ ಸಮಗ್ರ ಔಷಧ. ಇಂದು ನಾವು ಯೋಗದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಕೆಲವು ವರ್ಷಗಳ ಹಿಂದೆ, ಯೋಗಕ್ಕೆ ಆಯುರ್ವೇದ ರೂಪದಲ್ಲಿ ಮಾತ್ರ ಪ್ರಾಮುಖ್ಯತೆ ನೀಡಲಾಯಿತು ಆದರೆ ಪ್ರಸ್ತುತ ಕಾಲದಲ್ಲಿ ವೈಜ್ಞಾನಿಕವಾಗಿಯೂ ಸಹ ಯೋಗಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಾಗತಿಕ ಕರೋನಾ ಸಾಂಕ್ರಾಮಿಕದಲ್ಲಿ, ವೈದ್ಯರು ಸಹ ಯೋಗ ಮಾಡಲು ರೋಗಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡುಬಂದಿದೆ.ಯೋಗ ಮಾಡುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ದೇಹವು ರೋಗ ಮುಕ್ತವಾಗುತ್ತದೆ ಎಂದು ಹೇಳಿದರು.
ರಾಜ್ಯಸಭಾ ಸಂಸದರಾದ ಡಾ. ವಿನಯ್ ಸಹಸ್ರಬುದ್ಧೆ, ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಶ್ರೀ ಸ್ವಾಮಿ ಮಹೇಶ್ವರಾನಂದ, ಕುಲಪತಿ ಡಾ.ಎಚ್.ಆರ್. ಶ್ರೀ ನಾಗೇಂದ್ರ, ನಿರ್ದೇಶಕರಾದ ಗೌರವಾನ್ವಿತ ಡಾ ಮಂಜುನಾಥ್, ಬಿ. ಆರ್. ರಾಮಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Hon'ble Governor of Karnataka Shri Thaawarchand Gehlot attended 24th International conference on frontiers in yoga research and its applications program organized by S-Vyasa Institution a6 Prashanti Kutiram, Bengaluru today.
MP Vinay sahasthra Budde, Vishwaguru Mahamandaleshwar Paramhans Shri Swami Maheshwaranand, Chancellor Dr. H.R. Nagendra & other dignitaries were present.
0 Comments