Ticker

6/recent/ticker-posts

Ad Code

Responsive Advertisement

ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ಶ್ರೀ ಸುಂಕಲಮ್ಮ ದೇವಿ ಕುಂಭೋತ್ಸವದಲ್ಲಿ ಭಾಗವಹಿಸಿದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ

ಬಳ್ಳಾರಿ ಏ 21.ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದಾಸರ ನಾಗೇನಹಳ್ಳಿ ಗ್ರಾಮದ ಶ್ರೀ ಸುಂಕಲಮ್ಮ ದೇವಿಯ ಕುಂಬೋತ್ಸವ ಜಾತ್ರೆಯಲ್ಲಿ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ  ಬಿ.ನಾಗೇಂದ್ರ ಅವರು ಭಾಗವಹಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಜನತೆಗೆ ಸುಖ-ಶಾಂತಿ-ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ಅಣ್ಣ ನಾಗರಾಜ್, ಗೋವರ್ಧನ್ ರೆಡ್ಡಿ ಬಿ.ದುರುಗಣ್ಣ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಸಿಂಧುವಾಳ್ ಗಾದಿಲಿಂಗನಗೌಡ, ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಕೆ.ಹೊನ್ನಪ್ಪ, ಕಾಂಗ್ರೆಸ್ ಮುಖಂಡರಾದ ಮುದಿ ಮಲ್ಲಯ್ಯ, ಹಗರಿ ಗೋವಿಂದ, ಶ್ರೀನಾಥ್, ಅನ್ವರ್, ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ, ಸೋಮಲಿಂಗನಗೌಡ, ಅಮರೇಗೌಡ, ಸಿದ್ದರಾಮನಗೌಡ, ತಿಮ್ಮಪ್ಪ, ಬಾಬು, ಭೀಮ, ಇನ್ನೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement