ಬಳ್ಳಾರಿ,ಮೇ 26: ಬಳ್ಳಾರಿ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ(ಮೋತಿ ಸರ್ಕಲ್) ಅನೇಕ ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವ್ಯಾಪಾರಸ್ಥರನ್ನು ಅನಗತ್ಯವಾಗಿ ತೆರವುಗೊಳಿಸಿದಂತೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೂಚನೆ ನೀಡಿದ್ದಾರೆ.
ಎಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದಲ್ಲಿ ಅನೇಕ ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಅಂಗಡಿಗಳನ್ನು ತೆರವುಗೊಳಿಸಲು ಮಹಾನಗರ ಪಾಲಿಕೆ ಅಧಿಕಾರಿಗಳು ಸೂಚನೆ ನೀಡಿದ್ದರು.
ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಸ್ಥರು ಸಚಿವರನ್ನು ಭೇಟಿಯಾಗಿ ಅಹವಾಲು ತೋಡಿಕೊಂಡ ಹಿನ್ನೆಲೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು ಅವರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಕೊಡದಂತೆ ಮತ್ತು ತೆರವುಗೊಳಿಸದಂತೆ ಫೆÇೀನ್ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಸದ ಜಿ.ಸೋಮಶೇಖರ್ ರೆಡ್ಡಿ ಮತ್ತು ಬುಡಾ ಅಧ್ಯಕ್ಷರಾದ ಪಾಲನ್ನ, ಮಹಾನಗರಪಾಲಿಕೆ ಸದಸ್ಯರು ಸೇರಿದಂತೆ ಅನೇಕರು ಇದ್ದರು.

0 Comments