ಬೆಂಗಳೂರು, ಮೇ 26 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆ-2022ನ್ನು ಮೇ 30, 31 ಹಾಗೂ ಜೂನ್ 1 ರಂದು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದರು.
ಇಂದು ಪ್ರೆಸ್‍ಕ್ಲಬ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್‍ಲೈನ್‍ನಲ್ಲಿ ನೊಂದಾಯಿಸಿಕೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ಗುಣಮಟ್ಟದ ಟ್ರಾಕ್‍ಸೂಟ್ ಮತ್ತು ಕ್ಯಾಪ್ ನೀಡಲಾಗುವುದು ಎಂದರು.
ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು. ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ರುಚಿ-ಶುಚಿಯಾದ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಈ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸರ್ಕಾರಿ ನೌಕರರಿಗೆ ಒತ್ತಡದಿಂದ ಹೊರ ಬರಲು ಸಾಧ್ಯವಾಗುತ್ತದೆ ಎಂದರು.
ಮೇ 30 ರಂದು ಸಂಜೆ 4.30 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಕೆ.ಜಿ.ಐ.ಡಿ ಇಲಾಖೆಯ ಆನ್‍ಲೈನ್ ಸೇವೆ ಯೋಜನೆ ಹಾಗೂ ಎಸ್.ಎಂ.ಎಸ್ ಮೂಲಕ ನೌಕರರ ಮಾಸಿಕ ವೇತನ ಭತ್ಯೆಗಳ ಮಾಹಿತಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಮೇ 30ರಂದು ಸಂಜೆ 7 ಗಂಟೆಗೆ ಖ್ಯಾತ ಗಾಯಕರಾದ ವಿಜಯ್ ಪ್ರಕಾಶ್ ಅವರಿಂದ ‘ಸಂಗೀತ ರಸ ಸಂಜೆ’ ಕಾರ್ಯಕ್ರಮ, 31 ರಂದು ಸಂಜೆ 7 ಗಂಟೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ 15 ಜಾನಪದ ಕಲಾ ತಂಡಗಳಿಂದ ‘ಜನಪದೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಶ್ರೀನಿವಾಸ್, ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಭಂಡಾರಿ, ಹಿರಿಯ ಉಪಾಧ್ಯಕ್ಷರಾದ ಬಸವರಾಜು, ರುದ್ರಪ್ಪ, ಉಪಾಧ್ಯಕ್ಷರಾದ ಮಾಲತೇಶ್ ಉಪಸ್ಥಿತರಿದ್ದರು.


0 Comments