Ticker

6/recent/ticker-posts

Ad Code

Responsive Advertisement

ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು, ಮೇ 25,  (ಕರ್ನಾಟಕ ವಾರ್ತೆ) : ಕೃಷಿ ಇಲಾಖೆಯು 2022-23 ನೇ ಸಾಲಿನ ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ / ರೈತ ಮಹಿಳೆಯರಿಂದ “ಕೃಷಿ ಪಂಡಿತ” ಪ್ರಶಸ್ತಿಗಾಗಿ ಅರ್ಜಿಗಳನ್ನು  ಆಹ್ವಾನಿಸಿದೆ.

ಪ್ರಸಕ್ತ 2022-23 ನೇ ಸಾಲಿನಿಂದ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ “ಕೃಷಿ ಪಂಡಿತ” ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಸ್ಪರ್ಧಿಸಲು ಅರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement