Ticker

6/recent/ticker-posts

Ad Code

Responsive Advertisement

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ವಿತರಣೆ ದಾಖಲೆ ಸಲ್ಲಿಸಲು ಕಾಲಮಿತಿ ವಿಸ್ತರಣೆ:ಡಿಸಿ ಮಾಲಪಾಟಿ

ಬಳ್ಳಾರಿ,ಏ.21: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿಯನ್ನು ನಿಗಧಿಪಡಿಸುವ ಸಂಬಂಧ ಹಾಗೂ ಕಾನೂನು ಬದ್ಧ ವಾರಸುದಾರರಿಗೆ ಕೇಂದ್ರ ಸರ್ಕಾರದ ಎಸ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ ರೂ.50 ಸಾವಿರ ಹಾಗೂ ಸಾವು ದೃಢಪಟ್ಟಿದ್ದು ಆರೋಗ್ಯ ಇಲಾಖೆಯ ತಂತ್ರಾಂಶದಲ್ಲಿ ಲಭ್ಯವಿಲ್ಲದ ಪ್ರಕರಣಗಳನ್ನು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಕುಂದು ಕೊರತೆ ನಿವಾರಣಾ ಸಮಿತಿಯಲ್ಲಿ ತೀರ್ಮಾನಿಸಿState War Room Line Listನಲ್ಲಿ ಸೇರ್ಪಡೆಗೊಳಿಸಿ SCRE ಮಾರ್ಗಸೂಚಿಯನ್ನಯ ಪರಿಹಾರ ಪಾವತಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ಈ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. 

2022 ಮಾ.20ಕ್ಕಿಂತ ಮೊದಲು ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮಾ.20ರಿಂದ 60 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಿದೆ. 2022 ಮಾ.20ರ ನಂತರ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿಯನ್ನು ನಿಗಧಿಗೊಳಿಸಿದೆ.

ಸ್ವೀಕೃತವಾದ ಅರ್ಜಿಗಳ ಸಂಸ್ಕರಣೆ ಹಾಗೂ ಪರಿಹಾರ ಪಾವತಿಗೆ ಅರ್ಜಿ ಸ್ವೀಕರಿಸಿದ ದಿನಾಂಕದಿಂದ 30 ದಿನಗಳ ಕಾಲಮಿತಿ ಅನ್ವಯವಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಕೋವಿಡ್-19 ವೈರಾಣು ಸೋಂಕಿನಿಂದ ತಮ್ಮ ಬಂಧುಗಳನ್ನು ಮತ್ತು ಕುಟುಂಬದ ಸದಸ್ಯರನ್ನು ಕಳೆದುಕೊಂಡವರ ನೋವನ್ನು ಗಮನದಲ್ಲಿರಿಸಿಕೊಂಡು, ಮಾನವೀಯತೆಯ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯವು ವಿಪತ್ತು ಪರಿಹಾರ ನಿಧಿಯಿಂದ ರೂ.50 ಸಾವಿರ ಪರಿಹಾರ ಮೊತ್ತವನ್ನು ಮೃತರ ಕಾನೂನು ಬದ್ಧ ವಾರಸುದಾರರಿಗೆ ಪಾವತಿಸಲು ಎಲ್ಲಾ ರಾಜ್ಯಗಳಿಗೆ ಆದೇಶಿಸಿರುತ್ತದೆ. ಆದ್ದರಿಂದ ಇಂತಹ ಪ್ರಕರಣಗಳಲ್ಲಿ ಯಾವುದೇ ವ್ಯಕ್ತಿಯು ಸುಳ್ಳು ಮಾಹಿತಿ ಅಥವಾ ನಕಲಿ ದಾಖಲೆಗಳ ಆಧಾರದ ಮೇಲೆ ಪರಿಹಾರ ಪಡೆದು, ಸರ್ಕಾರದ ಘನೋದ್ದೇಶವನ್ನು ದುರುಪಯೋಗ ಪಡಿಸಿಕೊಂಡಲ್ಲಿ ಅದು ನೈತಿಕತೆಗೆ ವಿರುದ್ಧವಾದ ಕ್ರಮವಾಗಿರುತ್ತದೆ.

ಯಾವುದೇ ವ್ಯಕ್ತಿಯು ಸುಳ್ಳು ಮಾಹಿತಿ ಅಥವಾ ನಕಲಿ ಅರ್ಜಿ ಸಲ್ಲಿಸಿ ಪರಿಹಾರ

ಪಡೆದಿದ್ದು, ತದನಂತರ ಅದು ಸುಳ್ಳು ಎಂದು ಸಾಬೀತಾದಲ್ಲಿ ಅಂತಹ ವ್ಯಕ್ತಿಗಳು ನಡೆದ ಪರಿಹಾರ ಮೊತ್ತವನ್ನು ವಸೂಲಿ ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆ.

ಯಾವುದೇ ಅರ್ಜಿದಾರರು ಕೋವಿಡ್-19 ಮರಣ ಪರಿಹಾರ ಪಡೆಯುವ ಸಲುವಾಗಿ ಸಲ್ಲಿಸಿದ ಅರ್ಜಿಯಲ್ಲಿ ಸುಳ್ಳು ಮಾಹಿತಿ, ನಕಲಿ ದಾಖಲೆಗಳನ್ನು ಹಾಜರು ಪಡಿಸಿ ಪರಿಹಾರ ಪಡೆದಿದ್ದು ಸಾಬೀತಾದಲ್ಲಿ ಅಂತಹ ವ್ಯಕ್ತಿಗಳು ವಿಪತ್ತು ನಿರ್ವಹಣಾ ಅಧಿನಿಯಮ, 2005ರ ನಿಯಮ 52ರಡಿ ಸೂಕ್ತ ದಂಡದೊಂದಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್-19 ಪರಿಹಾರ ಪಾವತಿಯ ಮಾರ್ಗಸೂಚಿಗಳಲ್ಲಿ ಸೂಚಿಸಿರುವಂತೆ ಸೂಕ್ತ ವಿಚಾರಣೆ ನಡೆಸದೆ, ಮನವಿಗಳನ್ನು ಪರಿಶೀಲಿಸದೇ ಕೋವಿಡ್-19 ಪರಿಹಾರ ವಿತರಣೆಗೆ ಶಿಫಾರಸ್ಸು ಮಾಡುವಂತಹ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧವೂ ಸಹ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಶಿಸ್ತಿನ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.





Post a Comment

0 Comments

Ad Code

Responsive Advertisement