ಬೆಂಗಳೂರು, ಮೇ 07 (ಕರ್ನಾಟಕ ವಾರ್ತೆ) : ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 08, 2022 ರಂದು ಮಧ್ಯಾಹ್ನ 2.30 ಗಂಟೆಗೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಏಪ್ರಿಲ್ 09, 2022 ರಂದು ಪೂರ್ವಾಹ್ನ 10 ಗಂಟೆಗೆ ಎಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನವನ್ನು ವಿಧಾನಸೌಧದ 3ನೇ ಮಹಡಿ, ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಆಡಳಿತ ಸುಧಾರಣೆ- ಕಾರ್ಯಾಧ್ಯಯನ) ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments