ಬೆಂಗಳೂರು, ಮೇ 21, (ಕರ್ನಾಟಕ ವಾರ್ತೆ) :ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮ, ಐಎಸ್‍ಎನ್ ಪ್ರಸಾದ್, ರಾಕೇಶ್‍ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಹೇಮಲತಾ ಹಾಗೂ ಸಚಿವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

0 Comments