ಬಳ್ಳಾರಿ,ಮೇ 20: ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಂಯೋಜಕರ (Technical Programmer) ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ಅಭ್ಯರ್ಥಿಯು ಕಡ್ಡಾಯವಾಗಿ ಬಿಇ/ಬಿ.ಟೆಕ್/ಎಮ್‍ಸಿಎ ಪದವೀಧರರಾಗಿರಬೇಕು. ಅಭ್ಯರ್ಥಿಯು ಕಡ್ಡಾಯವಾಗಿ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಓದಲು ಮತ್ತು ಬರೆಯಲು ಸಮರ್ಥರಾಗಿರಬೇಕು. ಅಭ್ಯರ್ಥಿಯು ಡಿಬಿಎಂಎಸ್ ಅಪ್ಲಿಕೇಷನ್ಸ್, ಇಆರ್‍ಎಮ್‍ಎಸ್, ಎಆರ್‍ಒ ನೆಟ್ ಮತ್ತು ಇತರೆಗಳಲ್ಲಿ ಕನಿಷ್ಠ 1 ವರ್ಷದ ಅನುಭವ ಉಳ್ಳವರಾಗಿರಬೇಕು. ಆಯ್ಕೆಗೊಂಡ ಅಭ್ಯರ್ಥಿಯು ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ದೂ.08392-277100ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

0 Comments