Ticker

6/recent/ticker-posts

Ad Code

Responsive Advertisement

ರಾಜ್ಯ ಪರಿಸರ ಪ್ರಶಸ್ತಿ / ನಾಮನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು, ಮೇ 21,  (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯು 2021-22ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗಳಿಗಾಗಿ / ನಾಮ ನಿರ್ದೇಶನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ (ಸರ್ಕಾರಿ / ಸರ್ಕಾರೇತರ ಸಂಸ್ಥೆಗಳು / ಕಂಪನಿಗಳು / ಟ್ರಸ್ಟ್‍ಗಳು) ತಲಾ 1 ಲಕ್ಷ. ರೂ. ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ನೀಡಲಾಗುವುದು.

ಅರ್ಜಿ / ನಾಮನಿರ್ದೇಶನ ಸಲ್ಲಿಸಲು ಮೇ 31, ಕೊನೆಯ ದಿನಾಂಕವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, (ಜೀವಿ ಪರಿಸ್ಥಿತಿ ಮತ್ತು ಪರಿಸರ), ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಕೊಠಡಿ ಸಂಖ್ಯೆ 709, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಬೆಂಗಳೂರು-560001, ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್ ಕಛೇರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಭವನ, ನಂ.49, ಚರ್ಚ್ ಸ್ಟ್ರೀಟ್, ಬೆಂಗಳೂರು- 560 001, ಮಹಾನಿರ್ದೇಶಕರು, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋದನಾ ಸಂಸ್ಥೆ, ‘ಹಸಿರು ಭವನ, ದೊರೆಸಾನಿಪಾಳ್ಯ ಫಾರೆಸ್ಟ್ ಕ್ಯಾಂಪಸ್ ವಿನಾಯಕನಗರ ಸರ್ಕಲ್ ಜೆ.ಪಿ.ನಗರ 5ನೇ ಫೇಸ್ ಬೆಂಗಳೂರು-560 078, ಸದಸ್ಯ ಕಾರ್ಯದರ್ಶಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ನೆಲಮಹಡಿ, ವನವಿಕಾಸ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560 003, ಈ ಕಛೇರಿಗಳಲ್ಲಿ ಸಂಪರ್ಕಿಸಬಹುದು ಹಾಗೂ ವೆಬ್‍ಸೈಟ್https://forest.karnataka.gov.in, www.kspcb.gov.in, www.karnataka.gov.in/empri  ಮತ್ತು  https://kbbwebportal.karnataka.gov.in  ನಲ್ಲಿ ಸಹ ನೋಡಬಹುದಾಗಿದೆ.ನಲ್ಲಿ ಸಹ ನೋಡಬಹುದಾಗಿದೆ.


(ವಿ.ಸೂ: ಪ್ರಶಸ್ತಿಗಾಗಿ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ) ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement