ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಬೆಂಗಳೂರಿನ ವಿಧಾನ ಸೌಧದಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ದಿನಾಂಕ 10-5-2022 ರಂದು ಬೆಳಿಗ್ಗೆ ಏರ್ಪಡಿಸಿದ್ದ ಅಚಾರ್ಯತ್ರಯರ ಜಯಂತ್ಯುತ್ಸವ ಹಾಗೂ ಸಪ್ತರ್ಷಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ), ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ಅವರುಗಳು ಅಚಾರ್ಯತ್ರಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಶಾಸಕರಾದ ಶ್ರೀ ಎಲ್.ಎ.ರವಿ ಸುಬ್ರಮಣ್ಯ, ಶ್ರೀ ಎಸ್.ಅರ್.ವಿಶ್ವನಾಥ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಮೂರ್ತಿ ಸೇರಿದಂತೆ ಅನೇಕ ವಿದ್ವಾಂಸರು, ವಿಪ್ರರು ಉಪಸ್ಥಿತರಿದ್ದರು.

0 Comments