ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ವರದಿ
ಆರ್ಯಭಟ ಸಾಂಸ್ಕೃತಿಕ ವೇದಿಕೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಾಹಿತಿ ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನ್ಯಾಯಮೂರ್ತಿ ಅರಳಿ ನಾಗರಾಜರವರು ಪ್ರದಾನ ಮಾಡಿದರು. ಖ್ಯಾತ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಸಂಸ್ಥೆಯ ಅಧ್ಯಕ್ಷರಾದ ಎಚ್. ಎಲ್. ಎನ್. ರಾವ್, ಕಸಾಪ ಅಧ್ಯಕ್ಷರಾದ ಮಹೇಶ್ ಜೋಷಿ, ರಾಜ್ಯ ಹಾಗೂ ವಿವಿಧ ದೇಶಗಳ ಸಾಧಕರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ನ್ಯಾಯಮೂರ್ತಿ ಅರಳಿ ನಾಗರಾಜರವರು, ಮತಪೆಟ್ಟಿಗೆಯಲ್ಲಿ ಭ್ರಷ್ಟಾಚಾರದ ಮೂಲ ಬೇರು ಗಳಿದ್ದು ಅದನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಯುವಶಕ್ತಿ ಜಾಗೃತವಾಗುವಂತೆ ಕರೆ ನೀಡಿದರು.
ಜಾತಿಯತೆ ಭ್ರಷ್ಟಾಚಾರದಂತಹ ಅಪಮೌಲ್ಯ ಗಳು ಹೆಚ್ಚುತ್ತಿವೆ.ಹಾಗಾಗಿ ರಾಷ್ಟ್ರೀಯ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಪ್ರತಿಜ್ಞೆ ಮಾಡೋಣ ಎಂಬ ಆಶಯವನ್ನು ವ್ಯಕ್ತಪಡಿಸಿ, ಅವರು ಪ್ರಸ್ತುತ ಕಾಲಘಟ್ಟದ ವಿದ್ಯಾಮಾನಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಪ್ರಶಸ್ತಿ ಸ್ವೀಕರಿಸಿದ ಎಲ್ಲರಿಗೂ ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಎಚ್ ಎಲ್ ಎನ್ ರಾವ್ ಅವರು ಮಾತನಾಡಿ, ಒಳ್ಳೆಯ ಸಮಾಜ ನಿರ್ಮಾಣ ಮಾಡಬೇಕಾದರೆ ಒಳ್ಳೆಯವರನ್ನು ಗುರುತಿಸಿ ಗೌರವಿಸುವುದು ಬಹಳ ಮುಖ್ಯವಾದ ಕೆಲಸ ಎಂದು ಹೇಳಿದರು.
ಭಾರತಿ ವಿಷ್ಣುವರ್ಧನ್ ಅವರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ವಿಷ್ಣುವರ್ಧನ್ ಅವರನ್ನು ಸ್ಮರಿಸಿದರು.
ಅಧ್ಯಕ್ಷ ಮಹೇಶ್ ಜೋಶಿ ಅವರು ಮಾತನಾಡಿ ನಾಡು-ನುಡಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಚಲನಚಿತ್ರ ಕ್ಷೇತ್ರದ ಅನಿರುದ್ಧ, ರೂಪಿಕಾ, ಸಾಹಿತ್ಯ ಮತ್ತು ಪತ್ರಿಕೋದ್ಯಮದಿಂದ ಗೊರೂರು ಪಂಕಜ, ಅವರಿಗೆ ಪರಿಸರ ಕ್ಷೇತ್ರದಿಂದ ಮುನಿರೆಡ್ಡಿ, ಕನ್ನಡ ನಾಡು-ನುಡಿಗಾಗಿ ನವೀನ್ ಕುಮಾರ್ ಬಾಬು ಮತ್ತಿತರರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ್ಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

0 Comments