ಬೆಂಗಳೂರು, ಮೇ 09 (ಕರ್ನಾಟಕ ವಾರ್ತೆ) : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್.ಸ್ವಾಮಿ ಅವರ ಜನ್ಮಶತಮಾನೋತ್ಸವದ ನೆನಪಿಗಾಗಿ ಮೇ 27, 2022 ರಿಂದ ಮೇ 29, 2022ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊನ್ನೆಮರಡುವಿನಲ್ಲಿ “ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರ” ಎಂಬ 3 ದಿನಗಳ ಅಧ್ಯಯನ ಶಿಬಿರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂಧ 40 ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 13, 2022 ರಂದು ಕೊನೆಯ ದಿನಾಂಕವಾಗಿದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://sahithyaacademy.karnataka.gov.in ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments