Ticker

6/recent/ticker-posts

Ad Code

Responsive Advertisement

ಕೇಂದ್ರ ಪುರಸ್ಕøತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಶಿಮ್ಲಾದಿಂದ ಪ್ರಧಾನಮಂತ್ರಿ ನರೇಂದ್ರ ಸಂವಾದ

ಇಡೀ ವಿಶ್ವದಲ್ಲಿ ಭಾರತವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸೋಣ:ಪ್ರಧಾನಮಂತ್ರಿ ನರೇಂದ್ರ ಮೋದಿ

ಬಳ್ಳಾರಿ, ಮೇ.31: 75ನೇ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕೇಂದ್ರ ಪುರಸ್ಕøತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂವಾದ ಹಗೂ ಗರೀಬ್ ಕಲ್ಯಾಣ ಸಮ್ಮೇಳನ ಮಂಗಳವಾರ ನಡೆಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾದಿಂದ ದೇಶದಾದ್ಯಂತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಫಲಾನುಭವಿಗಳ ಅಭಿಪ್ರಾಯಗಳನ್ನು ಆಲಿಸಿದರು. ನಮ್ಮ ಸರಕಾರ ಜಾರಿಗೆ ತಂದ ಯೋಜನೆಗಳ ಸದುಯಪಯೋಗಪಡಿಸಿಕೊಳ್ಳುವುದದಿಂದ ತಮ್ಮಲ್ಲಿ ಯಾವ ಬದಲಾವಣೆಗಳಾಗಿವೆ ಎಂಬುದನ್ನು ಫಲಾನುಭವಿಗಳ ಮಾತಿನ ಮೂಲಕವೇ ತಿಳಿದುಕೊಂಡರು.

ನಗರದ ಜಿಪಂ ನಜೀರ್‍ಸಾಬ್ ಸಭಾಂಗಣದಲ್ಲಿ ಸಂವಾದ ಹಾಗೂ ಗರೀಬ್ ಕಲ್ಯಾಣ ಸಮ್ಮೇಳನದ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದರು.

ಸಂಸದ ವೈ.ದೇವೇಂದ್ರಪ್ಪ, ಶಾಸಕ ವೈ.ಎಂ.ಸತೀಶ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಸ್ಪಿ ಸೈದುಲು ಅಡಾವತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಪ್ರಧಾನಮಂತ್ರಿ ಆವಾಸ್ ಯೋಜನೆ,ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಉಜ್ವಲ ಯೋಜನಾ, ಪೋಷಣ್ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಯೋಜನಾ, ಸ್ವಚ್ಛ ಭಾರತ್ ಮಿಶನ್, ಜಲಜೀವನ ಮಿಶನ್ ಮತ್ತು ಅಮೃತ್, ಪ್ರಧಾನಮಂತ್ರಿ ಸ್ವನಿಧಿ ಸ್ಕೀಂ, ಒನ್ ನೇಷನ್ ಒನ್ ಕಾರ್ಡ್, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನಾ, ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನಾ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕಲ್ಯಾಣ ಕಾರ್ಯಕ್ರಮಗಳ, ಪ್ರಧಾನಮಂತ್ರಿ ಮುದ್ರಾ ಯೋಜನಾ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ನಂತರ ಮಾತನಾಡಿದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು, ಬಡವರ ಕಲ್ಯಾಣಕ್ಕಾಗಿಯೇ ನಾವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.  ಯೋಜನೆಗಳಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಸರ್ಕಾರದ ಅನುದಾನ ಸೋರಿಕೆಯನ್ನು ತಡೆಗಟ್ಟಿದ್ದೇವೆ. 08 ವರ್ಷಗಳ ನಮ್ಮ ಆಡಳಿತದಲ್ಲಿ ನಾನು ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿದ್ದೇನೆ, ದೇಶದ 130ಕೋಟಿ ಜನರ ಪರಿವಾರದ ಸದಸ್ಯನಾಗಿದ್ದೇನೆ.  ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸೋಣ ಎಂದರು.

ಇಂದು ದೇಶದ 10ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದೆವೆ.  ಇಡೀ ರಾಷ್ಟ್ರದ ಜನ ಈ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಭಾಗವಹಿಸಿ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

*ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಜಿಲ್ಲೆಯ ರೈತರ ನೆರವಿಗೆ 202 ಕೋಟಿ ರೂ.ವರ್ಗಾವಣೆ: ಬಳ್ಳಾರಿ ಜಿಲ್ಲೆಯಲ್ಲಿ 94486 ಅರ್ಹ ರೈತ ಕುಟುಂಬಗಳಿಗೆ 2019-20 ರಿಂದ 2021-22ನೇ ಸಾಲಿನ ವರೆಗೆ ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರೂ.137.57 ಕೋಟಿಗಳು ಹಾಗೂ ರಾಜ್ಯ ಸರ್ಕಾರದಿಂದ ರೂ.64.66 ಕೋಟಿಗಳು ಸೇರಿದಂತೆ ಒಟ್ಟು ರೂ.202.23 ಕೋಟಿಗಳು ಮೊತ್ತ ವರ್ಗಾವಣೆಯಾಗಿದ್ದು, ಕೇಂದ್ರ ಸರಕಾರದ 11ನೇ ಕಂತನ್ನು ರೈತರಿಗೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವರ್ಗಾವಣೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ಜಿಲ್ಲೆಯಲ್ಲಿ ಬಳ್ಳಾರಿ ತಾಲ್ಲೂಕಿನ 26687 ರೈತರಿಗೆ ವರ್ಗಾವಣೆಯಾದ ಮೊತ್ತ ರೂ.51.46ಕೋಟಿ, ಕುರುಗೋಡು 14432 ರೈತರಿಗೆ ವರ್ಗಾವಣೆಯಾದ ಮೊತ್ತ ರೂ.35.04 ಕೋಟಿ, ಕಂಪ್ಲಿ 10464 ರೈತರಿಗೆ ವರ್ಗಾವಣೆಯಾದ ಮೊತ್ತ ರೂ.31.38 ಕೋಟಿ, ಸಂಡೂರು 12985 ರೈತರಿಗೆ ವರ್ಗಾವಣೆಯಾದ ಮೊತ್ತ ರೂ.31.80 ಕೋಟಿ, ಸಿರುಗುಪ್ಪ 29918 ರೈತರಿಗೆ ವರ್ಗಾವಣೆಯಾದ ಮೊತ್ತ ರೂ.52.55 ಕೋಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ಭಾರತ ಸರ್ಕಾರವು ಎಲ್ಲಾ ವರ್ಗದ ರೈತರ ಆದಾಯ ವೃದ್ಧಿಸಲು 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಎಲ್ಲಾ ವರ್ಗದ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷದಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ರೂ.2ಸಾವಿರಗಳಂತೆ ಒಟ್ಟು 3 ಸಮಾನ ಕಂತುಗಳಲ್ಲಿ ಒಟ್ಟು ರೂ.6 ಸಾವಿರ ಪ್ರತಿ ವರ್ಷಕ್ಕೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು. ರಾಜ್ಯ ಸರ್ಕಾರದಿಂದ ಸದರಿ ಯೋಜನೆಯಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷದಲ್ಲಿ ಪ್ರತಿ ಆರು ತಿಂಗಳಿಗೊಮ್ಮೆಯಂತೆ ರೂ.2 ಸಾವಿರಗಳಂತೆ ಒಟ್ಟು 2 ಸಮಾನ ಕಂತುಗಳಲ್ಲಿ ಒಟ್ಟು ರೂ.4ಸಾವಿರ ಪ್ರತಿ ವರ್ಷಕ್ಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 10 ಕಂತುಗಳು ಹಾಗೂ ರಾಜ್ಯ ಸರ್ಕಾರದಂದ 5 ಕಂತುಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೇರವಾಗಿ ಹಣ ವರ್ಗಾವಣೆ ಮುಖಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದರು.





 


Post a Comment

0 Comments

Ad Code

Responsive Advertisement