Ticker

6/recent/ticker-posts

Ad Code

Responsive Advertisement

Flash News: ‘ತೆನೆ' ಭಾರ ಇಳಿಸಿ, 'ಕಮಲ' ಹಿಡಿದ ಬಸವರಾಜ್ ಹೊರಟ್ಟಿ !

ಬೆಂಗಳೂರು, ಮೇ 03: ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದಾರೆ.

ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಅಮಿತ್ ಶಾ ಹಾಗು ಇನ್ನಿತರೆ ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಹೂಗುಚ್ಛ ನೀಡಿ ಬಸವರಾಜ್ ಹೊರಟ್ಟಯವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ರಾಜ್ಯದ ಹಿರಿಯ ರಾಜಕಾರಣಿ, ಜೆಡಿಎಸ್ನ ಹಿರಿಯ ನಾಯಕ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ಪಕ್ಷ ತೊರೆದಿದ್ದಾರೆ. ಅವರು ಬಿಜೆಪಿ ಸೇರುವ ಬಗ್ಗೆ ಈ ಹಿಂದೆಯೇ ಹಲವು ಭಾರಿ ಆಶಯ ವ್ಯಕ್ತಪಡಿಸಿದ್ದರು. ಇದೀಗ ಅಧಿಕೃತವಾಗಿ ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಇನ್ನು ಪಕ್ಷ ಸೇರುತ್ತಿದ್ದಂತೆ ಬಸವರಾಜ್ ಹೊರಟ್ಟಿಗೆ ಬಿಜೆಪಿ ಭರ್ಜರಿ ಗಿಫ್ಟ್ ಕೂಡ ನೀಡಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಟಿಕೆಟ್‌ನ್ನು ಬಸವರಾಜ್ ಹೊರಟ್ಟಿಗೆ ನೀಡುವುದಾಗಿ ಕನ್ಪರ್ಮ್ ಕೂಡ ಮಾಡಿದೆ. ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರಗಳು ತೆರವಾಗಲಿದ್ದು, ಭಾರತೀಯ ಜನತಾ ಪಕ್ಷ ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೂ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಾತ್ರ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ. ಇದೀಗ ಹೊರಟ್ಟಿಗೆ ಟಿಕೆಟ್ ನೀಡುವುದು ಕನ್ಫರ್ಮ್ ಆಗಿದೆ. ಸದ್ಯ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೀಘ್ರವೇ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಜೆಡಿಎಸ್ ಬಗ್ಗೆ ಬೇರೆ ಏನಿಲ್ಲ, ಈಗಲೂ ಪ್ರೀತಿ ಇದೆ ಅಂತ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಬಿಜೆಪಿ ಸೇರುವುದಕ್ಕೆ ಕಾರಣ ಅಂತ ಏನಿಲ್ಲ, ರಾಜಕಾರಣದ ಕಾರಣಕ್ಕಾಗಿ ಸೇರಿದೆ. ಈಗಿನ ವ್ಯವಸ್ಥೆಯಲ್ಲಿ ಆಕಸ್ಮಿಕ ನಿರ್ಧಾರ ತೆಗೆದುಕೊಂಡೆ. ಈ ಬಗ್ಗೆ ನನಗೆ ಆತಂಕ ಏನಿಲ್ಲ ಅಂತ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಅಮಿತ್ ಶಾ ವಾಸ್ತವ್ಯ ಹೂಡಿರುವ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಸವರಾಜ ಹೊರಟ್ಟಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕರೆದೊಯ್ದರು. ಈ ಸಂದರ್ಭದಲ್ಲಿ ಬಸವರಾಜ್ ಹೊರಟ್ಟಿ ಅಧಿಕೃತವಾಗಿ ಬಿಜೆಪಿ ಸೇರಿದರು. ಬಳಿಕ ಅವರೊಂದಿಗೆ ಚರ್ಚೆ ಮಾಡಿದರು.

Varthajala daily, Malleshwaram, Bengaluru

Post a Comment

0 Comments

Ad Code

Responsive Advertisement