Ticker

6/recent/ticker-posts

Ad Code

Responsive Advertisement

Flash News: ಏಳು ಜನ ಮಂತ್ರಿಗಳು ಇರುವ ಮಹಾನಗರನ ಇದು: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಿನ್ನೆಯಿಂದ ಏನಾದರೂ ಶಾಸಕರ, ಅಧಿಕಾರಿಗಳ ಸಭೆ ಕರೆದಿದ್ದಾರಾ? ಸಭೆ ನಡೆಸುವ ಕನಿಷ್ಠ ಸೌಜನ್ಯವೂ ಇಲ್ಲವೇ ಅವರಿಗೆ? ನಾಡಿನ‌ ಜನತೆಗೆ ಏನು ಸಂದೇಶ ಕೊಡುತ್ತಿದ್ದಿರಾ? ಹೇಳುವವರು, ಕೇಳುವವರು ನಿಮಗೆ ಯಾರೂ ಇಲ್ಲ. ತಾತ್ಕಾಲಿಕ ಪರಿಹಾರವನ್ನಾದ್ರೂ ಕೊಡಲಿಲ್ಲ, ಸ್ಪಷ್ಟ ಸಂದೇಶವನ್ನಾದರು ಕೂಡ ಕೊಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸಚಿವರು ಏನು ಮಾಡುತ್ತಿದ್ದಾರೆ?. ನಗರದ ಉಸ್ತುವಾರಿ ಸಚಿವರೂ ಮುಖ್ಯಮಂತ್ರಿಗಳೇ ಆಗಿದ್ದಾರೆ. ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರು ಪರಸ್ಪರ ಪೈಪೋಟಿಗಿಳಿದಿದ್ದೂ ನೋಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಲೇವಡಿ ಮಾಡಿದರು.

ಅಲ್ಲದೆ, ನಗರದಲ್ಲಿ ಏಳು ಜನ ಸಚಿವರು ಇದ್ದಾರೆ. ಅವರು ಏನು ಮಾಡುತ್ತಿದ್ದಾರೆ. ಅವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದ ಕೋಟ್ಯಂತರ ರೂಪಾಯಿ ಅನುದಾನ ಎಲ್ಲಿ ಹೋಯಿತು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು. ಹಾಲಿ ಮುಖ್ಯಮಂತ್ರಿಗಳು, ಆರ್ ಆರ್ ನಗರದ ಶಾಸಕರಾದ ಮುನಿರತ್ನ/ಸಚಿವರು ಇಲ್ಲಿನ ಸಮಸ್ಯೆಯನ್ನು ಪರಿಹಾರ ಮಾಡುವುದು ಬಿಟ್ಟು ಚಿಕ್ಕಮಗಳೂರಿಗೆ ಹೋಗಿದ್ದರು. ಹೊಗಳುವುದಕ್ಕೆ ಸರ್ಟಿಫಿಕೇಟ್ ಕೊಡಲು ಹೋಗಿದ್ದರಾ ಇವರು? ಬೆಂಗಳೂರಿನಲ್ಲಿ ಸಿಎಂ ಒಂದಿಷ್ಟು ಕಡೆ ಹೋಗಿ ಕಾಟಚಾರಕ್ಕೆ ಸಂಚಾರ ಮಾಡುತ್ತಿದ್ದಾರೆ. ಅವರಿಗೆ ಮಳೆ ಅನಾಹುತ ಬಗೆಹರಿಸುವ ಮನಸ್ಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

Varthajala daily, Bengaluru

Post a Comment

0 Comments

Ad Code

Responsive Advertisement