Ticker

6/recent/ticker-posts

Ad Code

Responsive Advertisement

Flash News: ದೇವೇಗೌಡರ ಬ್ರ್ಯಾಂಡ್ ಬೆಂಗಳೂರು ಹೈಜಾಕ್: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಬ್ರ್ಯಾಂಡ್ ಬೆಂಗಳೂರು ದೇವೇಗೌಡರ ಕಾಲದಲ್ಲಿ ಇತ್ತು. ಹೈಜಾಕ್ ಮಾಡಿದ್ದು ಇವರು. ಅದು ದೇವೇಗೌಡರು ಮಾಡಿದ್ದು, ಸೂಟು ಬೂಟು ಹಾಕಿಕೊಂಡರೆ ಬ್ರ್ಯಾಂಡ್ ಬೆಂಗಳೂರು ಆಗಲ್ಲ.

ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಆಗುತ್ತದೆ. ಕೆರೆ ಕಟ್ಟೆ ನುಂಗಿ‌ ಹಾಕಿದ್ದು ಯಾರು? ಕೆರೆ ಕಟ್ಟೆ ಉಳಿಸಬೇಕು, ಒತ್ತುವರಿ ಮಾಡಬಾರದೆಂದು ಲಕ್ಷ್ಮಣ್ ರಾವ್ ನೇತೃತ್ವದಲ್ಲಿ ಕಮಿಟಿ ಮಾಡಿದರು. ಆದರೆ, ಅವರು ಕೊಟ್ಟ ವರದಿ ಕಸದ ಬುಟ್ಟಿಗೆ ಹೋಯಿತು. ಕೆರೆ ಮುಚ್ಚಿ ಹಾಕಿ‌ ಮನೆ ಕಟ್ಟಿದರು. ಕೆರೆಗೆ ಹೋಗುವ ನೀರು ಮನೆಗಳಿಗೆ ನುಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಡಿಎ ಒಂದು ದರಿದ್ರ, ಮನುಷ್ಯತ್ವ ಇದೆಯೇ ಅವರಿಗೆ. ಅದರ ನೋವು ಕಾಮನ್ ಮ್ಯಾನ್ ಅನುಭವಿಸುತ್ತಿದ್ದಾನೆ ಎಂದು ಕಿಡಿಕಾರಿದ ಕುಮಾರಸ್ವಾಮಿ ಅವರು, ರಾಜ್ಯಸಭೆಗೆ ಬಿಜೆಪಿಯಿಂದ ಅರ್ಜಿ ಹಾಕಿದ ವ್ಯಕ್ತಿಯೊಬ್ಬರ ಮನೆಗೆ ನೀರು ನುಗ್ಗಿದೆ. ಅಧಿಕಾರಿಗಳನ್ನು ಬೈತಾ ಇದ್ದಾರೆ, ಏನು ಪ್ರಯೋಜನ. ಮೊನ್ನೆ ಶಾಸಕರೊಬ್ಬರು ಅಧಿಕಾರಿಗೆ ಏನೇನು ಬೈದ್ರು ಅಂತ ನೋಡಿದರಲ್ಲವೇ ಎಂದರು.

Varthajala daily, Bengaluru

Post a Comment

0 Comments

Ad Code

Responsive Advertisement