ಬೆಂಗಳೂರು: ದಿನಾಂಕ: 16-05-2022 ಸೋಮವಾರದಂದು "ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ರವರು ತಿಳಿಸಿದ್ದಾರೆ. ಅಧಿಕೃತ ಆದೇಶದ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಮಾಂಶ ಮಾರಾಟ ಹಾಗು ಪ್ರಾಣಿವಧೆ ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.
Varthajala daily, Malleshwaram, Bengaluru

0 Comments