ಬೆಂಗಳೂರು: ನಿನ್ನೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೆವು. ನೆಲಮಂಗಲದಲ್ಲಿ ನಡೆದ ಜಲಧಾರೆ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ.
ಕಳೆದ ಮೂರು ವರ್ಷದಲ್ಲಿ ಪಕ್ಷದ ಒಂದಿಷ್ಟು ಜನ ದೂರ ಉಳಿದಿದ್ದಾರೆ. ಜೆಡಿಎಸ್ಗೆ ಭವಿಷ್ಯ ಇಲ್ಲವೆಂದು ಈ ಎರಡು ರಾಷ್ಟ್ರೀಯ ಪಕ್ಷದಿಂದ ಹಬ್ಬಿಸುತ್ತಿದ್ದರು. ಜೆಡಿಎಸ್ ನಿಂದ ದೂರ ಉಳಿದವರನ್ನು ಮನವೊಲಿಸಲು ಸಲಹೆ ಬಂದಿದೆ. ಆ ಮನವೊಲಿಸುವ ಕೆಲಸ ನಾನು ಮಾಡುತ್ತೇನೆ. ಇದಕ್ಕೆ ವೇದಿಕೆ ಸೃಷ್ಟಿ ಮಾಡುವ ಬಗ್ಗೆ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಆಗುವ ಕುರಿತು ಚರ್ಚೆ ಆಗಿದೆ ಎಂದು ಹೇಳಿದರು. ಇನ್ನು ವಿಧಾನಪರಿಷತ್ಗೆ ಒಬ್ಬರು ಆಯ್ಕೆ ಆಗಬೇಕು. ಅದರ ತೀರ್ಮಾನ ದೇವೇಗೌಡರು ತೆಗೆದುಕೊಳ್ಳುತ್ತಾರೆ. ರಾಜ್ಯಸಭೆಗೆ ನಾಲ್ಕನೇ ಅಭ್ಯರ್ಥಿಗೆ ಎರಡು ಪಕ್ಷಗಳಿಗೆ ಯಾವುದೇ ಸಂಖ್ಯಾಬಲ ಇಲ್ಲ. ಹಾಗಾಗಿ ನಮ್ಮ ಪಕ್ಷಕ್ಕೆ ಒಂದು ಸ್ಥಾನ ಇದೆ. ಇದರ ಬಗ್ಗೆಯೂ ದೇವೇಗೌಡರ ತೀರ್ಮಾನ ಅಂತಿಮವಾಗಿರುತ್ತದೆ ಎಂದರು.
Varthajala daily, Bengaluru

0 Comments