Ticker

6/recent/ticker-posts

Ad Code

Responsive Advertisement

Flash News: ಒಂದು ವಾರ ನಗರ ಪ್ರದಕ್ಷಿಣೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ತೋರಿಕೆಗಾಗಿ ಪ್ರದಕ್ಷಣೆ ಮಾಡಲ್ಲ. ತಡವಾದರೂ ಒಂದು ವಾರ ನಾನು ನಗರ ಪ್ರದಕ್ಷಿಣೆ ಮಾಡುತ್ತೇನೆ.

ನಗರದ ಬಹುತೇಕ ಕ್ಷೇತ್ರಗಳಿಗೆ ನಾನು ಹೋಗುತ್ತೇನೆ. ಜೊತೆಗೆ ಒಂದಿಷ್ಟು ಭಾಗಗಳಿಗೆ ಮುಖಂಡರು ಹೋಗುತ್ತಾರೆ. ನೀರು ನುಗ್ಗಿರುವ ಮನೆಗಳಿಗೆ ಪಕ್ಷದ ವತಿಯಿಂದ ತಕ್ಷಣ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನಾನು ಸಮಸ್ಯೆ ಆದ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಒಂದು ಗಂಟೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಅವರು ತಿಳಿಸಿದರು. ಬಡ ಕುಟುಂಬಗಳಿಗೆ ನೆರವು ನೀಡುತ್ತೇನೆ. ಯಾವ್ಯಾವ ಬಡಾವಣೆಯಲ್ಲಿ ಏನೇನು ಅನಾಹುತ ಆಗಿದೆ ಅನ್ನೋದರ ಲಿಸ್ಟ್ ಮಾಡಲು ಹೇಳಿದ್ದೇನೆ ಎಂದರು. ಬಿಜೆಪಿ ಸರ್ಕಾರದ ಮೇಲೆ ಯಾವ ಭರವಸೆ ಉಳಿದಿಲ್ಲ. ಕಾಂಗ್ರೆಸ್, ಬಿಜೆಪಿ ಮೇಯರ್ ಗಳೇ ಇದ್ದಿದ್ದು. ಉತ್ತಮ‌ ವ್ಯಕ್ತಿಗಳನ್ನು ಆಯ್ಕೆ ಮಾಡಿ. ಆಸೆ ಆಮಿಷಕ್ಕೆ ಬಲಿಯಾಗದೇ ಶಾಶ್ವತ ಪರಿಹಾರ ನೀಡುವವರಿಗೆ ಮತ ಹಾಕಿ. ಆದಾಯ ತೆರಿಗೆ ಕಟ್ಟುವವರು  ನೀವೇ ( ಜನ) ಎಂದು ಸಲಹೆ ನೀಡಿದರು.

Varthajala daily, Bengaluru

Post a Comment

0 Comments

Ad Code

Responsive Advertisement