Ticker

6/recent/ticker-posts

Ad Code

Responsive Advertisement

Flashl News: ರಾಜಕಾಲುವೆ ಕಥೆ ಏನಾಯಿತು? ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಗರ ಪ್ರದಕ್ಷಿಣೆ ಹಾಕಿ ಕೇವಲ ಫೋಟೋಗೆ ಸೀಮಿತವಾಗಬಾರದು. ಹಿರಿಯ ಅಧಿಕಾರಿಗಳ ಸಭೆ ಕರೆಯಿರಿ. ಬೆಂಗಳೂರು ಕಮಿಷನರ್ ಅವರನ್ನು ಕರೆದು ಚರ್ಚೆ ಮಾಡಿ ಎಂದು ಸಲಹೆ ನೀಡಿದರು.

ಮೈತ್ರಿ ಸರ್ಕಾರ ಇದ್ದಾಗ ನಾನು ಕೆರೆ ಅಭಿವೃದ್ಧಿಗಾಗಿ ಸಭೆ ಮಾಡಿದ್ದೆ. ಸದನ ಸಮಿತಿ ಮಾಡಿ ಅದರ ಸದಸ್ಯ ಆಗಿದ್ದೆ. ಆದರೆ ಇದ್ಯಾವುದೋ ಸರಿ ಆಗಲ್ಲ ಅಂತ ಬಿಟ್ಟುಬಿಟ್ಟೆ ಎಂದ ಅವರು; ಪದ್ಮನಾಭನಗರದಲ್ಲಿ ಎಷ್ಟು ಕರೆ ನುಂಗಿ ಹಾಕಿದರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಕಿಡಿ ಕಾರಿದರು.

ಪುಟ್ಟೇನಹಳ್ಳಿಕೆರೆ 53 ಎಕರೆ ಕೆರೆ ಇತ್ತು. ಅದನ್ನು ಹೊಡೆದುಹಾಕಿ ಜೆಪಿ ನಗರ ಡಾಲರ್ಸ್ ಕಾಲೋನಿ‌ ಅಂತ ಮಾಡಿದರು. ಅಲ್ಲಿ ಮಂತ್ರಿಗಳು, ಐಎಎಸ್ ಅಧಿಕಾರಿಗಳ ಮನೆಗಳಿವೆ. ಕೆರೆಗಳನ್ನು ನುಂಗಿ ಹಾಕಿದ ಮೇಲೆ ಈಗ ಮೇಕೆದಾಟು ಅಂತ ಹೇಳ್ತಾರೆ. ಆ ಕೆರೆಗಳನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಹೀಗ್ಯಾಕೆ ಆಗುತ್ತಿತ್ತು. ಕೆಂಪಾಬುದಿ ಕೆರೆ ಏನಾಗಿದೆ ಈಗ? ಬರೀ ಕೊಳಚೆ ನೀರು ತುಂಬಿಸಲಾಗಿದೆ ಎಂದು ಅವರು ಕಿಡಿಕಾರಿದರು.

Varthajala daily, Bengaluru

Post a Comment

0 Comments

Ad Code

Responsive Advertisement