Ticker

6/recent/ticker-posts

Ad Code

Responsive Advertisement

ಜುಲೈ 1 ರಂದು ಪತ್ರಿಕಾ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಬೆಂಗಳೂರು ಜೂನ್ 30 (ಕರ್ನಾಟಕ ವಾರ್ತೆ) : ಕರ್ನಾಟಕ ಮಾಧ್ಯಮ ಅಕಾಡೆಮಿ,  ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ – 2022 ರ ಅಂಗವಾಗಿ  ಪತ್ರಿಕೋದ್ಯಮದ ಸವಾಲುಗಳು ಅಂದು – ಇಂದು – ಮುಂದು ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು  ಜುಲೈ 01 ರಂದು ಮಧ್ಯಾಹ್ನ 3.30 ಗಂಟೆಗೆ ಕಬ್ಬನ್ ಉದ್ಯಾನವನದಲ್ಲಿರುವ ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು  ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ವಿದೇಶಾಂಗ ಸಚಿವರಾದ ಎಸ್. ಎಂ. ಕೃಷ್ಣ ಅವರು ವಹಿಸಲಿದ್ದು, ಹಿರಿಯ ಪತ್ರಕರ್ತರಾದ ಶ್ರೀಮತಿ ಮಾಯಾ ಶರ್ಮಾ ಹಾಗೂ ಸಂಯುಕ್ತ ಕರ್ನಾಟಕ ಗ್ರೂಪ್‍ನ  ಸಮೂಹ ಸಂಪಾದಕರಾದ ಹುಣಸವಾಡಿ ರಾಜನ್ ರವರು ಪ್ರಧಾನ ಭಾಷಣಕಾರಾಗಿ ಭಾಗವಹಿಸುವರು.

ಮಾನ್ಯ ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ಮಂಜುನಾಥ್ ಪ್ರಸಾದ್, ಐ.ಎ.ಎಸ್  ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್. ಹರ್ಷ, ಐ.ಪಿ.ಎಸ್  ರವರು ಉಪಸ್ಥಿತರಿರಲಿದ್ದಾರೆ ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ.



Post a Comment

0 Comments

Ad Code

Responsive Advertisement