Ticker

6/recent/ticker-posts

Ad Code

Responsive Advertisement

ಆರ್ಯ ವೈಶ್ಯ ಅಭಿವೃದ್ಧಿ ನಿಗಮದಲ್ಲಿ ಶೇಕಡ 100 ರಷ್ಟು ಡಿ.ಬಿ.ಟಿ ಸಾಧನೆ - ಡಿ.ಎಸ್. ಅರುಣ್

ಬೆಂಗಳೂರು, ಜೂನ್ 07 (ಕರ್ನಾಟಕ ವಾರ್ತೆ) : 2021-22 ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ)ಕ್ಕೆ ಬಿಡುಗಡೆಯಾದ ರೂ. 5.00 ಕೋಟಿ ಅನುದಾನದಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಪ್ರಥಮ ಬಾರಿಗೆ ಆಧಾರ್ ಆಧಾರಿತ ಪಾವತಿಯ ಮೂಲಕ (DBT-Direct Beneficiary Transfer) 410 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಾಲ / ಸಹಾಯಧನವನ್ನು ಮಂಜೂರು ಮಾಡಿ ಶೇ.100 ರಷ್ಟು ಪ್ರಗತಿಯನ್ನು ಸಾಧಿಸಿರುವುದು ಹೆಮ್ಮೆಯ ವಿಷಯವಾಗಿರುತ್ತದೆ.

ನಿಗಮದ ಅಧ್ಯಕ್ಷನಾಗಿ ನನ್ನ ಅವಧಿಯಲ್ಲಿ ಕಳೆದ 2 ವರ್ಷಗಳಿಂದ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ (Digitalization)ಗಣಕೀಕರಣ ಮಾಡಲಾಗಿರುವುದರಿಂದ ಸಕಾಲದಲ್ಲಿ ಎಲ್ಲಾ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಸಾಲ / ಸಹಾಯಧನ ಮಂಜೂರು ಮಾಡಲು ಸಾಧ್ಯವಾಗಿರುತ್ತದೆ. ಡಿ.ಬಿ.ಟಿ ಕಡ್ಡಾಯವಾಗಿರುವುದರಿಂದ ಮುಂದಿನ ದಿನಗಳಲ್ಲೂ ಸಹ ಎಲ್ಲಾ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಅನ್ನು ಜೋಡಣೆ Aadhaar Seeding ಮಾಡಿರಬೇಕು ಹಾಗೂ ಖಾತೆಗಳನ್ನು ಚಾಲ್ತಿಯಲ್ಲಿಟ್ಟುಕೊಂಡಿರಬೇಕು.

ಕಳೆದ ಒಂದು ವರ್ಷದಲ್ಲೇ ನಿಗಮಕ್ಕೆ ರೂ.2.00 ಕೋಟಿ ಮರುಪಾವತಿ ಮೊತ್ತ ಸ್ವೀಕೃತಿಯಾಗಿದ್ದು, ಎಲ್ಲಾ ಫಲಾನುಭವಿಗಳಿಗೆ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಹಾಗೂ ಸಾಲ ಪಡೆದಂತಹ ಎಲ್ಲಾ ಫಲಾನುಭವಿಗಳು ಸಾಲವನ್ನು ಸದುಪಯೋಗ ಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕೆಂದು ನಾನು ವಿನಂತಿಸುತ್ತೇನೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ. ದೀಪಶ್ರೀ.ಕೆ ರವರು, ಸಿಬ್ಬಂದಿ ವರ್ಗದವರು, ಎಲ್ಲಾ ವಿಭಾಗೀಯ ಸಹಾಯಕ ಪ್ರಧಾನ ವ್ಯವಸ್ಥಾಪಕರು ಹಾಗೂ ಎಲ್ಲಾ ಜಿಲ್ಲಾ ವ್ಯವಸ್ಥಾಪಕರುಗಳಿಗೆ ನನ್ನ ಹೃತ್ಪೂರ್ವಕವಾದ ಅಭಿನಂದನೆಗಳು.


Post a Comment

0 Comments

Ad Code

Responsive Advertisement