ಬಳ್ಳಾರಿ ಜೂನ್ 30: ಬಳ್ಳಾರಿ ನಗರದ ಪ್ರತಿಷ್ಠಿತ ಬಳ್ಳಾರಿ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ& ಮ್ಯಾನೇಜ್‍ಮೆಂಟ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕಷನ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಕೆ.ಯಶವಂತ್ ಚಿಕ್ಕಬಳ್ಳಾಪುರದಲ್ಲಿ ನಡೆದ ನಾಲ್ಕು ದಿನಗಳ 23ನೇ ವಿತಾವಿ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟದ “ಹ್ಯಾಮರ್‍ಥ್ರೋ” ನಲ್ಲಿಭಾಗವಹಿಸಿ, 38.89 ಮೀಟರ್ಸ್ ದೂರ ಎಸೆದು, ಪ್ರಥಮ ಸ್ಥಾನ ಪಡೆದು ಬಂಗಾರದ ಪದಕವನ್ನು ಮುಡಿಗೇರಿಸಿಕೊಂಡು, ಕಾಲೇಜಿಗೆ ಕೀರ್ತಿಯನ್ನು ತಂದಿರುವುದು ಅತಿ ಸಂತಸ ತಂದಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಯಡವಳ್ಳಿ ಬಸವರಾಜ್‍ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಮತ್ತು ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.
0 Comments