ಬೆಂಗಳೂರು, ಜೂನ್ 08 (ಕರ್ನಾಟಕ ವಾರ್ತೆ) : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ನೀಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಈವರೆಗೆ ಶೇ.16 ರಷ್ಟು ರೈತರು ಮಾತ್ರ ಇ-ಕೆವೈಸಿ ಮಾಡಿಸಿದ್ದು, ಶೇ.84 ರಷ್ಟು ರೈತರು ಇದನ್ನು ಮಾಡಿಸಿರುವುದಿಲ್ಲ.
ಇ-ಕೆವೈಸಿ ಮಾಡಿಸದ ರೈತರು ಜುಲೈ 31 ರೊಳಗೆ ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸುವಂತೆ ಕೃಷಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
0 Comments