Ticker

6/recent/ticker-posts

Ad Code

Responsive Advertisement

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಬಳ್ಳಾರಿ,ಜೂ.07: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಕಟ್ಟಡ ಮುಂಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ 300ಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿವಿಯ ಕುಲಪತಿಗಳಾದ ಪ್ರೊ.ಸಿದ್ದು ಪಿ.ಆಲಗೂರ ಅವರು ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ.ಎಸ್.ಸಿ ಪಾಟೀಲ್, ಕುಲಸಚಿವರು(ಮೌಲ್ಯಮಾಪನ) ಪ್ರೊ.ರಮೇಶ ಓಲೇಕಾರ, ವಿತ್ತಾಧಿಕಾರಿಗಳಾದ ಡಾ.ಕೆ.ಸಿ.ಪ್ರಶಾಂತ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.



 


Post a Comment

0 Comments

Ad Code

Responsive Advertisement