ಬೆಂಗಳೂರು ಜೂನ್ 20,2022: ಯಲಹಂಕ ವಾಯುನೆಲೆಯಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತವನ್ನು ಕೋರಿದರು.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿ, .425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಘನ ಉಪಸ್ಥಿತಿವಹಿಸಿದ್ದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





.jpg)

.jpg)
0 Comments