ಬಳ್ಳಾರಿ, ಜೂ. 04. ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಂಪ್ಲಿ ವಿಧಾನಸಭಾ ಕ್ಷೇತ್ರದ ಗೆಣಿಕೆಹಾಳ್ ಮತ್ತು ಎಮ್ಮಿಗನೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಶುಕ್ರವಾರ ಭೇಟಿ ನೀಡಿ, ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಗೆಣಿಕೆಹಾಳು, ಎಚ್. ವೀರಾಪುರ, ಓರ್ವಾಯಿ, ಎಮ್ಮಿಗನೂರ ಮತ್ತು ನೆಲ್ಲುಡಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಶಾಸಕ ವೈ.ಎಂ. ಸತೀಶ್ ಅವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಜೊತೆ ಸಮಾಲೋಚನೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಗಳು ಮತ್ತು ಪರಿಹಾರದ ಮಾರ್ಗೋಪಾಯಗಳ ಕುರಿತು ಚರ್ಚೆ ನಡೆಸಿದರು. ಓರ್ವಾಯಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದಾಗ, ವಿದ್ಯುತ್ ಸಮಸ್ಯೆ ಮತ್ತು ಪ್ರಗತಿಯಲ್ಲಿರುವ ನರೇಗಾ ಕಾಮಗಾರಿಯ ಮಾಹಿತಿಗಳನ್ನು ಪಡೆದರು. ಸರ್ಕಾರಿ ಪ್ರೌಢ ಶಾಲೆಗೆ ಇರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಓ, ಕಾರ್ಯದರ್ಶಿ ಮತ್ತು ಶಿಕ್ಷಕ ವೃಂದದಿಂದ ಮಾಹಿತಿ ಸಂಗ್ರಹ ಮಾಡಿ, ಪರಿಹಾರದ ಸಾಧ್ಯತೆಗಳ ಚರ್ಚೆ ನಡೆಸಿದರು. ಗ್ರಾಮ ಪಂಚಾಯಿತಿ ಸದಸ್ಯರ ಜೊತೆ ಮಾತನಾಡುವಾಗ, ಶುದ್ಧವಾದ ಕುಡಿಯುವ ನೀರು ಪೂರೈಕೆ ಹಾಗೂ ಗ್ರಾಮಗಳಲ್ಲಿ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು. ಪ್ರತಿ ಮಗುವು ಶಾಲೆ ಬಂದು, ಶಿಕ್ಷಣ ಕಲಿಯುವಂತೆ ಎಲ್ಲರೂ ಶ್ರಮವಹಿಸಬೇಕು ಎಂದು ಹೇಳಿದರು.
.jpg)
0 Comments