ಸುಬ್ರಹ್ಮಣ್ಯ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ಅವರ ಪತ್ನಿ ಅನಿತಾ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kukke 30.06.2022: Karnataka Governor Hon'ble Shri Thaawarchand Gehlot along with his wife Anitha Gehlot visited the Kukke Sri Subramanya Temple and performed Special pooja today. He was accorded a warm welcome by temple and district administrations, respectively.
State Minister for Fisheries S Angara, Dakshina Kannada Deputy Commissioner Dr. Rajendra K V, Zilla Panchayat CEO, Dr. Kumar, Superintendent of Police Hrishikesh Bhagawan Sonawane, and others were present.






0 Comments