Ticker

6/recent/ticker-posts

Ad Code

Responsive Advertisement

ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸಾಂಸ್ಕೃತಿಕ ಸಂಘಟಕ ಸಿ. ಮಂಜುನಾಥ ನೇಮಕ

ಬಳ್ಳಾರಿ, ಜೂ. 12: ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ಸಾಂಸ್ಕೃತಿಕ ಸಂಘಟಕ, ಹಿರಿಯ ಪತ್ರಕರ್ತ ಸಿ. ಮಂಜುನಾಥ ನೇಮಕವಾಗಿದ್ದಾರೆ.


ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷರೂ ಆಗಿರುವ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಅವರು ನೇಮಿಸಿ ಆದೇಶ ಪತ್ರ ನೀಡಿದ್ದಾರೆ.

ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ತಾಲೂಕು ಅಧ್ಯಕ್ಷರನ್ನು ನೇಮಿಸಿ ಕೇಂದ್ರ ಪರಿಷತ್ತಿನ ಅನುಮತಿ ಪಡೆಯಲು ಆದೇಶ ಪತ್ರದಲ್ಲಿ ಟಿ.ತಿಮ್ಮೇಗೌಡರು ನೂತನ‌ ಅಧ್ಯಕ್ಷ ಸಿ.ಮಂಜುನಾಥ್ ಅವರಿಗೆ ಸೂಚಿಸಿದ್ದಾರೆ. 

ಕರ್ನಾಟಕ ಜಾನಪದ ಪರಿಷತ್ತಿನ ಬಳ್ಳಾರಿ ತಾಲೂಕು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಮಂಜುನಾಥ್,  ಡಾ.ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾಗಿ, ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷರಾಗಿ ಹಾಗೂ ಪ್ರಕಾಶಕರಾಗಿ (ಸಂಸ್ಕೃತಿ ಪ್ರಕಾಶನ) ಅವಿಭಜಿತ ಬಳ್ಳಾರಿ ‌ಜಿಲ್ಲೆಯಲ್ಲಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿ ಗಮನ ಸೆಳೆದಿದ್ದಾರೆ. 

ಪತ್ರಿಕೋದ್ಯಮ ಹಾಗೂ ಕನ್ನಡ ನಾಡು ನುಡಿಯ ಅನುಪಮ ಸೇವೆಗಾಗಿ ಮಂಜುನಾಥ್ ಅವರಿಗೆ ಕರ್ನಾಟಕ ಮಾಧ್ಯಮ‌ ಅಕಾಡೆಮಿ ಪ್ರಶಸ್ತಿ ಸೇರಿದಂತೆ ರಾಜ್ಯಮಟ್ಟದ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

***

Post a Comment

0 Comments

Ad Code

Responsive Advertisement