Ticker

6/recent/ticker-posts

Ad Code

Responsive Advertisement

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ಬೆಂಗಳೂರು, ಜೂನ್ 02 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರÀ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

 ಆಸಕ್ತರು ಜೂನ್ 10 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ನ್ನು  ಸಂಪರ್ಕಿಸಬಹುದಾಗಿದೆ.


Post a Comment

0 Comments

Ad Code

Responsive Advertisement