ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೂ ಆಗಮಿಸಿ, ರಸ್ತೆಗುಂಡಿಗಳನ್ನು ವೀಕ್ಷಿಸಬೇಕೆಂದು ಆಗ್ರಹಿಸಲು ಆಮ್ ಆದ್ಮಿ ಪಾರ್ಟಿಯು ಬೃಹತ್ ಚಳವಳಿ ಹಮ್ಮಿಕೊಂಡಿದೆ.
“ಬೆಂಗಳೂರಿನ ರಸ್ತೆಗಳಿಗಾಗಿ ರಾಜ್ಯ ಸರ್ಕಾರದ ಬೊಕ್ಕಸದಿಂದ ಕಳೆದ ಐದು ವರ್ಷಗಳಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಬಿಡುಗಡೆಯಾಗಿದೆ. ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಆ ಹಣವು ಜನಪ್ರತಿನಿಧಿಗಳ ಜೇಬು ಸೇರಿ, ರಸ್ತೆಗಳ ತುಂಬಾ ಗುಂಡಿಗಳಾಗಿವೆ. ಇದರ ವಿರುದ್ಧ ಆಮ್ ಆದ್ಮಿ ಪಾರ್ಟಿಯು ನಿರಂತರವಾಗಿ ಪ್ರತಿಭಟನೆ, ಅಭಿಯಾನಗಳನ್ನು ಮಾಡಿ, ಸುಮಾರು 70ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದೆ. ಆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಗುಂಡಿಗಳಿಂದ ಅಪಘಾತ ಸಾಮಾನ್ಯವಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಸೌಜನ್ಯವೂ ಈ ಸರ್ಕಾರಕ್ಕಿಲ್ಲ” ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.
ಎಎಪಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, “ಬೆಂಗಳೂರು ರಾಜ್ಯ ರಾಜಧಾನಿ ಮಾತ್ರವಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ನಗರವಾಗಿದೆ. ದೇಶದಲ್ಲೇ ಅತಿಹೆಚ್ಚು ತೆರಿಗೆ ಸಂಗ್ರಹವಾಗುವ ಎರಡನೇ ದೊಡ್ಡ ನಗರವಿದು. ಆದರೆ ಡಬಲ್ ಎಂಜಿನ್ ಸರ್ಕಾರವೆಂದು ಕರೆದುಕೊಳ್ಳುವ ಬಿಜೆಪಿ ಸರ್ಕಾರವು ನಗರದ ಹೆಸರನ್ನು ಉದ್ಧಾರ ಮಾಡುವ ಬದಲು ಹಾಳು ಮಾಡುತ್ತಿದೆ. ರಸ್ತೆ ಗುಂಡಿಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ಬಿಜೆಪಿ ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ಇಲ್ಲಿರುವ ಬೃಹತ್ ಉದ್ದಿಮೆಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.
ನೂತನ ರಾಜ್ಯ ಕಚೇರಿ:
ಆಮ್ ಆದ್ಮಿ ಪಾರ್ಟಿಯ ನೂತನ ರಾಜ್ಯ ಪ್ರಧಾನ ಕಚೇರಿಯು ಕುಮಾರ ಪಾರ್ಕ್ ವೆಸ್ಟ್‌ನಲ್ಲಿರುವ ರೈಲ್ವೆ ಪ್ಯಾರಲೆಲ್ ರಸ್ತೆಯಲ್ಲಿ ಸಿದ್ಧವಾಗಿದ್ದು, ಜೂನ್ 16ರ ಗುರುವಾರ ಬೆಳಗ್ಗೆ 11:00 ಗಂಟೆಗೆ ಉದ್ಘಾಟನೆಯಾಗಲಿದೆ. ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ರಾಷ್ಟ್ರೀಯ ವಕ್ತಾರರಾದ ದಿಲೀಪ್ ಪಾಂಡೆಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು.
ಧನ್ಯವಾದಗಳೊಂದಿಗೆ,
ಜಗದೀಶ್ ವಿ. ಸದಂ
ರಾಜ್ಯ ಮಾಧ್ಯಮ ಸಂಚಾಲಕರು, ಎಎಪಿ
ಸಂಪರ್ಕ: 9380029038

0 Comments