Ticker

6/recent/ticker-posts

Ad Code

Responsive Advertisement

ಲೈಬ್ರರಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 16 (ಕರ್ನಾಟಕ ವಾರ್ತೆ) : ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಗ್ರಂಥಾಲಯದಲ್ಲಿ 2022-23ನೇ ಸಾಲಿಗೆ ಒಂದು ವರ್ಷದ “ಲೈಬ್ರರಿ ಅಪ್ರೆಂಟಿಸ್ ತರಬೇತುದಾರರಿಗೆ” ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಅಂಡ್ ಇನ್‍ಫರ್‍ಮೇಶನ್ ಸೈನ್ಸ್ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಶೈಕ್ಷಣಿಕ ವರ್ಷ 2022-23ನೇ ಸಾಳಿನಲ್ಲಿ ಪರೀಕ್ಷೆ ಬರೆದು ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಈಗಾಗಲೇ 2021-22ನೇ ಸಾಲಿನಲ್ಲಿ ಅಪ್ರೆಂಟಿಸ್‍ಗಳಾಗಿ ತರಬೇತಿ ಪಡೆದಿರುವ ಹಾಗೂ ಅದರ ಹಿಂದಿನ ವರ್ಷಗಳಲ್ಲಿ ತರಬೇತಿ ಪಡೆದುಕೊಂಡಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ರೂ. 15,000/- ಶಿಷ್ಯವೇತನ ನೀಡಲಾಗುವುದು. ನೇಮಕಾತಿಯಲ್ಲಿ 03 ಜನ ಅಪ್ರೆಂಟಿಸ್‍ಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜೂನ್ 24, 2022 ಕೊನೆಯ ದಿನಾಂಕವಾಗಿದೆ. ಸಂದರ್ಶನದ ದಿನಾಂಕದಂದು ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.

ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ಜಾಲತಾಣ  www.bcu.ac.in  ನಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವ-ದೃಢೀಕರಿಸಿ ವಿಶ್ವವಿದ್ಯಾಲಯದ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು -560001 ಇವರಿಗೆ ಸಲ್ಲಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement