ಬೆಂಗಳೂರಿಗೆ ಭೇಟಿ ನೀಡಿದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು
ಬೆಂಗಳೂರು, ಜೂನ್ 13, (ಕರ್ನಾಟಕ ವಾರ್ತೆ):
ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ( ಇಸ್ಕಾನ್ ) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಇದೇ ಸಮಯದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳೊಂದಿಗೆ ಆಗಮಿಸಿದ ಭಾರತದ ಮಹಿಳಾ ಪ್ರಥಮ ಪ್ರಜೆ ಶ್ರೀಮತಿ ಸವಿತಾ ಕೋವಿಂದ್ ಅವರನ್ನೂ ಸಹ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಶ್ರೀಮತಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments