ಬಳ್ಳಾರಿ,ಜೂ.10: ಬಳ್ಳಾರಿಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಉಪಟಳ ಹೆಚ್ಚಾಗಿರುವ ಕುರಿತು ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿದ್ದು,ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಡಾಡಿ ದನಗಳ ಉಪಟಳ ಕುರಿತಂತೆ ಸಾರ್ವಜನಿಕರಿಂದ ಅನೇಕ ದೂರುಗಳು ಈ ಕಾರ್ಯಾಲಯಕ್ಕೆ ಸಲ್ಲಿಕೆಯಾಗಿವೆ ಎಂದು ವಿವರಿಸಿರುವ ಅವರು ಸಂಬಂಧಪಟ್ಟ ಬಿಡಾಡಿ ದನಗಳ ಮಾಲೀಕರು ತಮ್ಮ ತಮ್ಮ ದನಗಳನ್ನು ಸ್ವಗೃಹದಲ್ಲಿ ಪೋಷಣೆ ಮಾಡತಕ್ಕದ್ದು, ತಪ್ಪಿದಲ್ಲಿ ಬಿಡಾಡಿ ದನಗಳನ್ನು ನಗರದಿಂದ ಹಿಡಿದು ಗೋಶಾಲೆಗೆ ಸಾಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

0 Comments